ಜುಲೈ 3 ರಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ

ಜುಲೈ 3 ರಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಾಳೆ ಜು. 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯವಿಲ್ಲದಿದ್ದರೆ ಸಾರ್ವಜನಿಕರು ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಹವಾಮಾನ ಇಲಾಖೆ ಹಾಗೂ ಜಿಲ್ಲಾ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ತಿಳಿಸಿದೆ.