ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್)ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಕೆ.ಎಫ್.ಸಿ. ಸಮೀಪ ಗುರುವಾರ ನಡೆದಿದೆ.
ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದ್ದು, ಅಪಘಾತದ ವೇಳೆ ಬಸ್ಸಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಘಟನೆ ಸಂಭವಿಸಿದ ಪರಿಣಾಮ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತದಿಂದ ಬಸ್ ಹಾಗೂ ರಸ್ತೆ ವಿಭಾಜಕಕ್ಕೆ ಹಾನಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಣಿಪಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಯಿಂದಾಗಿ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದರೂ, ಬಳಿಕ ಸಂಚಾರವನ್ನು ಸುಗಮಗೊಳಿಸಲಾಯಿತು.
