ಉಡುಪಿ–ಮಣಿಪಾಲ ರಸ್ತೆಯ ಹಯಗ್ರೀವ ನಗರ ವ್ಯಾಪ್ತಿಯಲ್ಲಿ ಬೃಹತ್ ಮರದ ದೊಡ್ಡ ಕೊಂಬೆಯೊಂದು ಮುರಿದು ರಸ್ತೆಗೆ ಬಿದ್ದ ಪರಿಣಾಮ, ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಯಿತು. ಕೆಲಕಾಲ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಬಳಿಕ ಮರದ ಕೊಂಬೆಯನ್ನು ಕತ್ತರಿಸಿ ರಸ್ತೆಯಿಂದ ತೆರವುಗೊಳಿಸಿದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169(ಎ)ಯಲ್ಲಿ ವಾಹನ ಸಂಚಾರವನ್ನು ಮತ್ತೆ ಸುಗಮಗೊಳಿಸಲಾಯಿತು.
ಭಾರೀ ಗಾಳಿ-ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
