ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (SASS) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಜುಲೈ 5ರಂದು ಭಾನುವಾರ ಸಂಜೆ 4 ಗಂಟೆಗೆ ಉಡುಪಿಯ ಅಂಬಲಾಡಿ ಬೈಪಾಸ್ ಸಮೀಪದ ಹೋಟೆಲ್ ಕಾರ್ತಿಕ್ ಎಸ್ಟೇಟ್ನಲ್ಲಿ ಆಯೋಜಿಸಲಾಗಿದೆ.
ಸಭೆಯಲ್ಲಿ ಉಡುಪಿ ತಾಲೂಕು ಸಮಿತಿಯ ಪದಗ್ರಹಣ ಹಾಗೂ ಕುಂದಾಪುರ ತಾಲೂಕು ಮಹಿಳಾ ಸಮಿತಿಯ ಪದಗ್ರಹಣ ಕಾರ್ಯಕ್ರಮಗಳು ನಡೆಯಲಿವೆ. SASS ಕೇಂದ್ರ ಸಮಿತಿ ಹಾಗೂ ರಾಜ್ಯ ಸಮಿತಿಯ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದು, ಜಿಲ್ಲಾ ಸಮಿತಿಯ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಚರ್ಚೆ ನಡೆಸಿ, ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು.
ಜಿಲ್ಲಾ SASSನ ಎಲ್ಲಾ ಪದಾಧಿಕಾರಿಗಳು, ತಾಲೂಕು ಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಅಧ್ಯಕ್ಷ ರಾಧಾಕೃಷ್ಣ ಮೆಂಡನ್ ಹಾಗೂ ಜಿಲ್ಲಾ ಮಹಿಳಾ ಅಧ್ಯಕ್ಷೆ ತಾರಾ ಯು. ಆಚಾರ್ಯ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
