ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಭಾಷಣ: ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ದೂರು ದಾಖಲು

ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಭಾಷಣ: ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ದೂರು ದಾಖಲು

ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರತಿಭಟನೆಯ ವೇಳೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಆಕ್ಷೇಪಾರ್ಹ ಭಾಷಣ ಮಾಡಿದ್ದು , ಸಮಾಜದಲ್ಲಿ ಉದ್ವಿಗ್ನತೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಪ್ರಸಾದ್ ರಾಜ್ ಕಾಂಚನ್ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.