ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ: ಡಿವೈಡರ್‌ಗೆ ಡಿಕ್ಕಿ, ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್)ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಕೆ.ಎಫ್.ಸಿ. ಸಮೀಪ ಗುರುವಾರ ನಡೆದಿದೆ. ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದ್ದು, ಅಪಘಾತದ ವೇಳೆ ಬಸ್ಸಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಘಟನೆ ಸಂಭವಿಸಿದ ಪರಿಣಾಮ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ಬಸ್ ಹಾಗೂ ರಸ್ತೆ ವಿಭಾಜಕಕ್ಕೆ ಹಾನಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಣಿಪಾಲ ಪೊಲೀಸರು ಸ್ಥಳಕ್ಕೆ […]

ಜೂ.28: ಉಡುಪಿ ಯಕ್ಷಗಾನ ಕಲಾರಂಗದಿಂದ ‘ಸೂರು ನೂರರ ಸಡಗರ’

  ಉಡುಪಿ ಯಕ್ಷಗಾನ ಕಲಾರಂಗದ ‘ವಿದ್ಯಾಪೋಷಕ್’ ಯೋಜನೆಯಡಿಯಲ್ಲಿ 100ರ ಮನೆ ಹಸ್ತಾಂತರ ಹಾಗೂ ಸೂರು ನೂರರ ಸಡಗರ ಕಾರ್ಯಕ್ರಮವನ್ನು ಜೂ. 28ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಉಡುಪಿ ಯಕ್ಷಗಾನ ಕಲಾರಂಗವು ಕಳೆದ 26 ವರ್ಷಗಳಿಂದ ಯಕ್ಷನಿಧಿಯ ಮೂಲಕ ಕಲಾವಿದರ ಕಲ್ಯಾಣಕ್ಕಾಗಿ ಹಾಗೂ 22 ವರ್ಷಗಳಿಂದ ವಿದ್ಯಾಪೋಷಕ್ ಯೋಜನೆಯಡಿ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸೇರಿದಂತೆ […]

© 2026 ನಮ್ಮ ವರ್ತಮಾನ :: copyright all right reserved.