ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕನ ಬಂಧನ: 1.52ಲಕ್ಷದ ಸೊತ್ತು ವಶ

ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲದ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಮಾಡುತ್ತಿದ್ದ ಆರೋಪದಡಿ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ ಹಾಗೂ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ಮೂಲದ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂಬಾತನನ್ನು ಬಂಧಿಸಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆ […]
ಉಡುಪಿ ಜಿಲ್ಲೆಯಲ್ಲಿ ವಶಪಡಿಸಿಕೊಂಡಿದ್ದ 36.29 ಲಕ್ಷ ರೂ. ಮೌಲ್ಯದ 73 ಕೆಜಿ ಗಾಂಜಾ ನಾಶ

ಮಾದಕ ವಸ್ತುಗಳ ಅಕ್ರಮ ಸಾಗಣೆ ಹಾಗೂ ಮಾರಾಟದ ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮದ ಭಾಗವಾಗಿ, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 73 ಕೆಜಿ 92 ಗ್ರಾಂ 828 ಮಿಲಿಗ್ರಾಂ ತೂಕದ, ಅಂದಾಜು 36,29,550 ರೂ. ಮೌಲ್ಯದ ಗಾಂಜಾವನ್ನು ಕಾನೂನುಬದ್ಧವಾಗಿ ನಾಶಪಡಿಸಲಾಯಿತು. ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಮೇಲ್ವಿಚಾರಣೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪಡುಬಿದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಮೆ. ಆಯುಷ್ ಎನ್‌ವಿರೋಟೆಕ್ ಪ್ರೈ.ಲಿ. […]
ಉಡುಪಿ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಪ್ರತಿಷ್ಠಿತ DG & IGP Commendation Disc ಪ್ರಶಸ್ತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 2025–2026ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಕಮೆಂಡೇಶನ್ ಡಿಸ್ಕ್ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯ ಎ.ಎಸೈ ರಾಜೇಶ್ ಪಿ., ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ARSI ಸುಧಾಕರ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ನಾಗರಾಜ್ ಪ್ರಭು ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಶಿವಕುಮಾರ್ ಎಚ್. ಎಂ. ಪ್ರಶ್ಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ತವ್ಯದ ಮೇಲಿನ ನಿಷ್ಠೆ, […]
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶ್ವಾಸಕೋಶ ಕ್ಯಾನ್ಸರ್ ಗೆ ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆ – Copy
ಆರೋಗ್ಯ ಕ್ಷೇತ್ರದಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಅತ್ಯಂತ ಸಂಕೀರ್ಣ ಮತ್ತು ಅಪರೂಪದ ಶ್ವಾಸನಾಳ ಕ್ಯಾನ್ಸರ್‌ಗೆ ಸಂಬಂಧಿಸಿದ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಕಡಿಮೆ ನೋವು, ವೇಗವಾದ ಚೇತರಿಕೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ನಡೆದ ಈ ಶಸ್ತ್ರಚಿಕಿತ್ಸೆ ಇದೀಗ ರಾಜ್ಯದ ಗಮನ ಸೆಳೆದಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 36 ವರ್ಷದ ವ್ಯಕ್ತಿಯ ಶ್ವಾಸನಾಳದ ಕೆಳಭಾಗದಲ್ಲಿ ಕ್ಯಾನ್ಸರ್ ಗೆಡ್ಡೆ ಇರುವುದನ್ನು ಎಂಡೋಸ್ಕೋಪಿ ಪರೀಕ್ಷೆಯಲ್ಲಿ ಪತ್ತೆ […]
