ಉಡುಪಿ ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ

ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ಎಸ್‌ಐಆರ್ (SIR) ಅಭಿಯಾನಕ್ಕೆ ವಿಧಿವತ್ತಾಗಿ ಚಾಲನೆ ನೀಡಲಾಯಿತು. ಅಭಿಯಾನವು ಯಶಸ್ವಿಯಾಗಿ ನಡೆಯಲೆಂದು ಶ್ರೀಪಾದರು ಆಶೀರ್ವಚನ ನೀಡಿದರು. ಎಸ್‌ಐಆರ್ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಹಾಗೂ ಸಂಬಂಧಿತ ಅಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಿದರು. ಸಮಾಜದ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸಕ್ರಿಯವಾಗಿ […]
ಜು.4: ಉಡುಪಿ ತುಳುಕೂಟದಿಂದ ‘ಮದೆರೆಂಗಿದರಂಗ್’ ಕಾರ್ಯಕ್ರಮ

ತುಳು ಬದುಕಿನ ವೈಶಿಷ್ಟ್ಯಗಳು, ಸಂಪ್ರದಾಯಗಳು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಉಡುಪಿ ತುಳುಕೂಟದ ಪ್ರಾಯೋಜಕತ್ವದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಮದೆರೆಂಗಿದರಂಗ್’ ಕಾರ್ಯಕ್ರಮವು ಜುಲೈ 4ರಂದು ಉಡುಪಿ ಬಡಗಬೆಟ್ಟು ಸೊಸೈಟಿಯ ಮೇಲ್ಭಾಗದಲ್ಲಿರುವ ಜಗನ್ನಾಥ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಪ್ರದಾಯಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಎಲೆಯಿಂದ ಪೀಂಪಿರಿ ಊದುವ ಸ್ಪರ್ಧೆ, ಹಲಸಿನ ಬೀಜದ ಸಿಪ್ಪೆ ತೆಗೆಯುವ ಸ್ಪರ್ಧೆ […]
