ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ಮೃತ್ಯು

ಗೋವಾದಲ್ಲಿ ಕಾರ್ಯಕ್ರಮ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿವೇಷ ಕಲಾವಿದ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ಬ್ರಹ್ಮಾವರ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಸಂತೆಕಟ್ಟೆ ಲಕ್ಷ್ಮಿನಗರ ನಿವಾಸಿ ಮಂಜುನಾಥ್ (43)ಮೃತರು. ಗೋವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಇನ್ನೋವಾ ಕಾರಿನಲ್ಲಿ ನಾಲ್ವರು ಸ್ನೇಹಿತರೊಂದಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಉಡುಪಿಯತ್ತ ಸಂಚರಿಸುತ್ತಿದ್ದ ವೇಗದೂತ ಬಸ್ ದಿಢೀರ್ ಬ್ರೇಕ್ ಹಾಕಿದ ಪರಿಣಾಮ, ಹಿಂದಿನಿಂದ ಬರುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಬಸ್‌ನ […]

ಉಡುಪಿ–ಮಣಿಪಾಲ ಹೆದ್ದಾರಿಯಲ್ಲಿ ಮರದ ಕೊಂಬೆ ಬಿದ್ದು ಸಂಚಾರ ಅಸ್ತವ್ಯಸ್ತ

ಉಡುಪಿ–ಮಣಿಪಾಲ ರಸ್ತೆಯ ಹಯಗ್ರೀವ ನಗರ ವ್ಯಾಪ್ತಿಯಲ್ಲಿ ಬೃಹತ್ ಮರದ ದೊಡ್ಡ ಕೊಂಬೆಯೊಂದು ಮುರಿದು ರಸ್ತೆಗೆ ಬಿದ್ದ ಪರಿಣಾಮ, ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಯಿತು. ಕೆಲಕಾಲ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಬಳಿಕ ಮರದ ಕೊಂಬೆಯನ್ನು ಕತ್ತರಿಸಿ ರಸ್ತೆಯಿಂದ ತೆರವುಗೊಳಿಸಿದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169(ಎ)ಯಲ್ಲಿ ವಾಹನ ಸಂಚಾರವನ್ನು ಮತ್ತೆ ಸುಗಮಗೊಳಿಸಲಾಯಿತು. ಭಾರೀ ಗಾಳಿ-ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ […]