ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನನ್ನು ಅಪಹರಿಸಿ ಕೇರಳದ ವುಡ್ ಕಂಪನಿಯಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಟಪಾಡಿ ನಿವಾಸಿ ಸುಚಿತ್ ನಾಯಕ್ ಮತ್ತು ವಾರಂಬಳ್ಳಿ ನಿವಾಸಿ ವಿಖ್ಯಾತ್ ಆಚಾರ್ಯ ಬಂಧಿತರು.ಮಟಪಾಡಿ ಗ್ರಾಮದ ತಾರೇಶ್ (38) ಅವರ ಪುತ್ರ ತಿಲಕ್ (ಹೆಸರು ಬದಲಿಸಲಾಗಿದೆ), ಬ್ರಹ್ಮಾವರ ಸರ್ಕಾರಿ ಬೋರ್ಡ್ ಹೈಸ್ಕೂಲ್‌ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಜೂನ್ 1ರಂದು ಬೆಳಿಗ್ಗೆ ಸುಮಾರು 8.30ಕ್ಕೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಬಾಲಕನನ್ನು […]
ಜು.3 ರಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಾಳೆ ಜು. 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯವಿಲ್ಲದಿದ್ದರೆ ಸಾರ್ವಜನಿಕರು ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಹವಾಮಾನ […]
ಮಣ್ಣಿನ ಜೊತೆ ಯೋಗ..ಮಕ್ಕಳ ಸಂಭ್ರಮ

ಶಾಲಾ ಶಿಕ್ಷಣ ಎಂದರೆ ಕೇವಲ ಪುಸ್ತಕಗಳಲ್ಲಿನ ಪಾಠವಲ್ಲ… ಅನುಭವದ ಮೂಲಕವೂ ಕಲಿಕೆ ಸಾಧ್ಯ ಎಂಬುದನ್ನು ಉಡುಪಿಯ ಪೋದಾರ್ ಪ್ರೆಪ್ ಶಾಲೆ ಮತ್ತೊಮ್ಮೆ ಸಾಬೀತುಪಡಿಸಿದೆ. “ಯೋಗ್ ಇನ್ ಮಡ್” ಎಂಬ ವಿಶಿಷ್ಟ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ, ಮಣ್ಣಿನೊಂದಿಗೆ ಆಟವಾಡುತ್ತಾ ಯೋಗಾಭ್ಯಾಸ ಮಾಡುವ ಅಪರೂಪದ ಅವಕಾಶ ಕಲ್ಪಿಸಲಾಯಿತು. ಮಕ್ಕಳಷ್ಟೇ ಅಲ್ಲ, ಪೋಷಕರೂ ಈ ಸಂಭ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಮಕ್ಕಳ ಮುಖದಲ್ಲಿನ ನಗು… ಕೈಯಲ್ಲಿ ಮಣ್ಣು… ಮನದಲ್ಲಿ ಸಂಭ್ರಮ… ಇದೇ ಉಡುಪಿಯ ಪೋದಾರ್ ಪ್ರೆಪ್ […]
