ಜು.11ರಂದು ಉಡುಪಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್: 2 ಸಾವಿರ ಪ್ರಕರಣಗಳ ಇತ್ಯರ್ಥ ಗುರಿ
ಉಡುಪಿ ಜಿಲ್ಲೆಯ ಮೂವರು ರೌಡಿಶೀಟರ್‌ಗಳ ಗಡಿಪಾರು

ಉಡುಪಿ ಜಿಲ್ಲೆಯ ಮೂವರು ರೌಡಿಶೀಟರ್‌ಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ (23) ಹಾಗೂ ಕರಾಣಿ ಮುಸೀನ್ (44), ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಇಲಿಯಾಸ್ (36) ಎಂಬವರನ್ನು ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿದೆ. ಮೊಹಮ್ಮದ್ ದಾನೀಶ್ ಮದನಿ ವಿರುದ್ಧ 8 ಪ್ರಕರಣಗಳು ದಾಖಲಾಗಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ. ಕರಾಣಿ ಮುಸೀನ್ ವಿರುದ್ಧ […]
ಉಡುಪಿ–ಮಣಿಪಾಲ ಹೆದ್ದಾರಿಯಲ್ಲಿ ಮರದ ಕೊಂಬೆ ಬಿದ್ದು ಸಂಚಾರ ಅಸ್ತವ್ಯಸ್ತ

ಉಡುಪಿ–ಮಣಿಪಾಲ ರಸ್ತೆಯ ಹಯಗ್ರೀವ ನಗರ ವ್ಯಾಪ್ತಿಯಲ್ಲಿ ಬೃಹತ್ ಮರದ ದೊಡ್ಡ ಕೊಂಬೆಯೊಂದು ಮುರಿದು ರಸ್ತೆಗೆ ಬಿದ್ದ ಪರಿಣಾಮ, ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಯಿತು. ಕೆಲಕಾಲ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಬಳಿಕ ಮರದ ಕೊಂಬೆಯನ್ನು ಕತ್ತರಿಸಿ ರಸ್ತೆಯಿಂದ ತೆರವುಗೊಳಿಸಿದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169(ಎ)ಯಲ್ಲಿ ವಾಹನ ಸಂಚಾರವನ್ನು ಮತ್ತೆ ಸುಗಮಗೊಳಿಸಲಾಯಿತು. ಭಾರೀ ಗಾಳಿ-ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ […]
ಜುಲೈ 3 ರಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಾಳೆ ಜು. 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯವಿಲ್ಲದಿದ್ದರೆ ಸಾರ್ವಜನಿಕರು ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಹವಾಮಾನ ಇಲಾಖೆ […]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ.ವಿದ್ಯಾರ್ಥಿನಿ ನಿಖಿತಾ (19) ಆತ್ಮಹತ್ಯೆ ಮಾಡಿಕೊಂಡವರು. ಜುಲೈ 1 ರಂದು ಬೆಳಿಗ್ಗೆ ನಿಖಿತಾ ಅವರ ತಾಯಿ ಕೆಲಸದ ನಿಮಿತ್ತ ಹೊರಗೆ ತೆರಳಿದ್ದ ವೇಳೆ, ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬಳಿಕ ಸ್ಥಳೀಯರು ಗಮನಿಸಿ ಕುಟುಂಬಸ್ಥರು […]
ಜುಲೈ 5ರಂದು ಉಡುಪಿ ಜಿಲ್ಲಾ SASS ಕಾರ್ಯಕಾರಿಣಿ ಸಭೆ

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (SASS) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಜುಲೈ 5ರಂದು ಭಾನುವಾರ ಸಂಜೆ 4 ಗಂಟೆಗೆ ಉಡುಪಿಯ ಅಂಬಲಾಡಿ ಬೈಪಾಸ್ ಸಮೀಪದ ಹೋಟೆಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ಆಯೋಜಿಸಲಾಗಿದೆ. ಸಭೆಯಲ್ಲಿ ಉಡುಪಿ ತಾಲೂಕು ಸಮಿತಿಯ ಪದಗ್ರಹಣ ಹಾಗೂ ಕುಂದಾಪುರ ತಾಲೂಕು ಮಹಿಳಾ ಸಮಿತಿಯ ಪದಗ್ರಹಣ ಕಾರ್ಯಕ್ರಮಗಳು ನಡೆಯಲಿವೆ. SASS ಕೇಂದ್ರ ಸಮಿತಿ ಹಾಗೂ ರಾಜ್ಯ ಸಮಿತಿಯ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದು, ಜಿಲ್ಲಾ ಸಮಿತಿಯ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಚರ್ಚೆ ನಡೆಸಿ, […]
