“ತೂಗುಸೇತುವೆಗಳ ಸರದಾರ” ಡಾ. ಗಿರೀಶ್ ಭಾರದ್ವಾಜ್ ನಿಧನ

ತೂಗುಸೇತುವೆಗಳ ನಿರ್ಮಾಣ ಕ್ಷೇತ್ರದಲ್ಲಿ ದೇಶ-ವಿದೇಶಗಳಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ, ಪದ್ಮಶ್ರೀ ಪುರಸ್ಕೃತ ಹಾಗೂ “ತೂಗುಸೇತುವೆಗಳ ಸರದಾರ” ಎಂದೇ ಖ್ಯಾತರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಡಾ. ಗಿರೀಶ್ ಭಾರದ್ವಾಜ್ ಅವರು ಮಂಗಳವಾರ ಮುಂಜಾನೆ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದರು. ಇಂಜಿನಿಯರಿಂಗ್ ಪದವಿ ಪಡೆದ ಬಳಿಕ “ಆಯಶಿಲ್ಪ ಇಂಜಿನಿಯರಿಂಗ್ ವರ್ಕ್ಸ್” ಸ್ಥಾಪಿಸಿದ್ದ ಡಾ. […]

SASS ಉಡುಪಿ ಜಿಲ್ಲಾ ಘಟಕಕ್ಕೆ “ಪ್ರಭಾವಿ ಜಿಲ್ಲೆ” ಗೌರವ

ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (SASS) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಹೋಟೆಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ಉಡುಪಿ ತಾಲೂಕು SASS ಸಮಿತಿ ಮತ್ತು ಕುಂದಾಪುರ ತಾಲೂಕು ಮಹಿಳಾ SASS ಸಮಿತಿಯ ಪದಗ್ರಹಣ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಕೇಂದ್ರ SASS ರಾಷ್ಟ್ರೀಯ ಅನ್ನದಾನ ಸಮಿತಿಯ ಅಧ್ಯಕ್ಷ ಟಿ. ಬಿ. ಶೇಖರ್‌ಜಿ ಅವರು ಮಾತನಾಡಿ, “SASSನ ಒಂದು ಜಿಲ್ಲಾ ಘಟಕ ಹೊಂದಿರಬೇಕಾದ ಸಂಘಟನಾ ವ್ಯವಸ್ಥೆ, ಸೇವಾ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಕ್ರಮಗಳನ್ನು […]

ಸಾಲಿಗ್ರಾಮ ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಪೇಟಾ ದಾಳಿ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಪೇಟಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳ ತಂಡ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಸುಧೀಂದ್ರ ಐತಾಳ್ ನಡೆಸುತ್ತಿರುವ ಈ ಕೇಂದ್ರದಲ್ಲಿ ನಾಯಿ, ಬೆಕ್ಕುಗಳಿಗೆ ಆಶ್ರಯ ನೀಡಲಾಗುತ್ತಿತ್ತು. ಆದರೆ ಸ್ವಚ್ಛತೆ ಹಾಗೂ ನಿರ್ವಹಣೆ ಕೊರತೆ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯಲ್ಲಿ ಪಟ್ಟಣ ಪಂಚಾಯತ್ ಸಿಬ್ಬಂದಿ, ಆರೋಗ್ಯ ಅಧಿಕಾರಿ ಹಾಗೂ ಕೋಟ ಪೊಲೀಸರು ಭಾಗವಹಿಸಿದ್ದರು. ಈ ವೇಳೆ ಗಾಯಗೊಂಡಿದ್ದ ಕೆಲವು ನಾಯಿ […]

ಉಡುಪಿಯಲ್ಲಿ ಶಾಲಾ ಬಸ್ ಗಳ ತಪಾಸಣೆ…!

ಉಡುಪಿ ಹಾಗೂ ಮಣಿಪಾಲದ ಠಾಣಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಖಾಸಗಿ ಶಾಲಾ ಬಸ್ ಗಳನ್ನು ಇಂದು ಪೊಲೀಸರು ದಿಢೀರ್ ದಿಢೀರ್ ತಪಾಸಣೆಗೆ ಒಳಪಡಿಸಿದ್ದಾರೆ. ಇತ್ತೀಚೆಗೆ ಶಾಲಾ ಬಸ್‌ಗಳ ಅಪಘಾತ ಪ್ರಕರಣಗಳು ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪೊಲೀಸರು ಶಾಲಾ ವಾಹನಗಳನ್ನು ಪರಿಶೀಲಿಸಿದರು. ತಪಾಸಣೆ ವೇಳೆ ಬಸ್‌ಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ, ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸಾಗಿಸಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದರು. ಇದರ […]

ಬಾಂಬ್ ಬೆದರಿಕೆ ಹಿನ್ನೆಲೆ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಿಗಿ ಭದ್ರತೆ, ಕಟ್ಟುನಿಟ್ಟಿನ ತಪಾಸಣೆ

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಬಾಂಬ್ ಬೆದರಿಕೆ ಇ-ಮೇಲ್‌ಗಳು ಹಾಗೂ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ನ್ಯಾಯಾಲಯದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದೆ. ನ್ಯಾಯಾಲಯದ ದೈನಂದಿನ ಕಲಾಪಗಳು ಯಾವುದೇ ಅಡಚಣೆಯಿಲ್ಲದೆ ನಡೆಯುವಂತೆ ಹಾಗೂ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವ ಉದ್ದೇಶದಿಂದ ಪ್ರತಿದಿನ ಬೆಳಗ್ಗೆ ನ್ಯಾಯಾಲಯ ಆರಂಭವಾಗುವ ಮುನ್ನ ಸಂಪೂರ್ಣ ಕೋರ್ಟ್ ಆವರಣದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಹಾಗೂ ಬಾಂಬ್ ಪತ್ತೆ ಮತ್ತು […]