ಸಿ.ಟಿ. ರವಿಗೆ ನೋಟಿಸ್: ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕುವ ಯತ್ನ – ಯಶ್ಪಾಲ್ ಸುವರ್ಣ ಆಕ್ರೋಶ

ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಪೊಲೀಸ್ ಇಲಾಖೆ ನೋಟಿಸ್ ನೀಡಿರುವ ಕ್ರಮವನ್ನು ಖಂಡಿಸಿರುವ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದುತ್ವವಾದಿ ನಾಯಕರ ಧ್ವನಿಯನ್ನು ಹತ್ತಿಕ್ಕುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ ಗೃಹ ಇಲಾಖೆ ಅಲ್ಪಸಂಖ್ಯಾತರ ತುಷ್ಟೀಕರಣ ಇಲಾಖೆಯಾಗಿ ಪರಿವರ್ತನೆಯಾಗಿದ್ದು, ಮತೀಯವಾದಿ ಶಕ್ತಿಗಳ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಟೀಕಿಸಿದರು. ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು […]

ಮನೆಯ ಅಂಗಳಕ್ಕೆ ನುಗ್ಗಿದ ಈಚರ್ ಲಾರಿ: ವಿದ್ಯುತ್ ಕಂಬಗಳಿಗೆ ಹಾನಿ

ಚಾಲಕನ ನಿಯಂತ್ರಣ ತಪ್ಪಿದ ಈಚರ್ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಕಂಬ ಹಾಗೂ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಬಳಿಕ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಶನಿವಾರ ರಾತ್ರಿ ಉಡುಪಿ ನಗರದ ಪೆರಂಪಳ್ಳಿ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಮಣಿಪಾಲದಿಂದ ಪೆರಂಪಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿಯು ರಾತ್ರಿ ಸುಮಾರು 9 ಗಂಟೆ ವೇಳೆಗೆ ನಿಯಂತ್ರಣ ತಪ್ಪಿ ಮೊದಲು ಟ್ರಾನ್ಸ್‌ಫಾರ್ಮರ್ ಕಂಬಕ್ಕೆ, ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಲಾರಿ ರವಿ ಪೂಜಾರಿ ಅವರಿಗೆ ಸೇರಿದ ಮನೆಯ […]