5 ವರ್ಷದ ಬಳಿಕ ವಿಕ್ರಂ ರವಿಚಂದ್ರನ್ ಗ್ರ್ಯಾಂಡ್ ಕಮ್‌ಬ್ಯಾಕ್:‘ಗುಚ್ಚಿ ಗರ್ಲ್’ಗೆ ಭರ್ಜರಿ ರೆಸ್ಪಾನ್ಸ್

ನಟ ವಿಕ್ರಂ ರವಿಚಂದ್ರನ್ ಸುದೀರ್ಘ ಐದು ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳ ಮುಂದೆ ಬಂದಿದ್ದಾರೆ. ತಮ್ಮ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ತಮ್ಮ ಬಹುನಿರೀಕ್ಷಿತ ಸಿನಿಮಾ ‘ಮುಧೋಳ್’ ಚಿತ್ರದ ಮೊದಲ ಹಾಡು ‘ಗುಚ್ಚಿ ಗರ್ಲ್’ ಅನ್ನು ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಹಾಡು ಬಿಡುಗಡೆಯೊಂದಿಗೆ ‘ಮುಧೋಳ್’ ಸಿನಿಮಾದ ಮೇಲಿನ ಕುತೂಹಲವೂ ಹೆಚ್ಚಾಗಿದೆ. ಸ್ಯಾಂಡಲ್‌ವುಡ್‌ನ ಶೋಮ್ಯಾನ್ ಖ್ಯಾತಿಯ ನಿರ್ದೇಶಕ ಪ್ರೇಮ್ ‘ಗುಚ್ಚಿ ಗರ್ಲ್’ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೇಮ್, […]