ಪ್ರಧಾನಿ ಮೋದಿಗೆ ಯಕ್ಷಗಾನ ರಾಜಕಿರೀಟ ತೊಡಿಸಿ ಸನ್ಮಾನಿಸಿದ ಪೇಜಾವರ ಶ್ರೀ

ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಐತಿಹಾಸಿಕ ಇಂದ್ರಪ್ರಸ್ಥ ಚಾತುರ್ಮಾಸ್ಯ ವ್ರತ ಸಮಾಪ್ತಿಗೆ ಕೆಲವೇ ದಿನಗಳು ಬಾಕಿಯಿರುವ ಸಂದರ್ಭದಲ್ಲಿ, ಮಂಗಳವಾರ ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಪ್ರಧಾನಿ ಮೋದಿ ಅವರು ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಆತ್ಮೀಯವಾಗಿ ಬರಮಾಡಿಕೊಂಡು ಉಭಯ ಕುಶಲೋಪರಿ ವಿಚಾರಿಸಿದರು. ಈ ವೇಳೆ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ್ಮಶತಮಾನೋತ್ಸವವನ್ನು 2031ರಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಪೇಜಾವರ ಮಠದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪಂಚವಾರ್ಷಿಕ ಯೋಜನೆಯ ಲಾಂಛನವನ್ನು ಪ್ರಧಾನಿ ನರೇಂದ್ರ […]
