ಸೌಜನ್ಯ ಪ್ರಕರಣ: ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ಹಾಗೂ ನಿಷ್ಪಕ್ಷಪಾತ ಮರುತನಿಖೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಐಜಿಪಿ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ಎಸ್‌ಐಟಿ ಕಾರ್ಯನಿರ್ವಹಿಸಲಿದೆ. ತಂಡದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ ಅಧಿಕಾರಿಗಳಾದ ನಿಶಾ […]

ಕಿನ್ನಿಮುಲ್ಕಿ ಗಣೇಶನ ಅದ್ದೂರಿ ವಿಸರ್ಜನಾ ಶೋಭಾಯಾತ್ರೆ

ಉಡುಪಿ: ಕಿನ್ನಿಮೂಲ್ಕಿಯ ಗಣಪತಿ ಕಟ್ಟೆಯಲ್ಲಿ ಕಳೆದ ಹತ್ತು ದಿನಗಳಿಂದ ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ಭಕ್ತಿಭಾವದಿಂದ ಪೂಜಿಸಲ್ಪಟ್ಟ ಗಣೇಶನಿಗೆ ಬುಧವಾರ ರಾತ್ರಿ ಭಾವಪೂರ್ಣ ವಿದಾಯ ನೀಡಲಾಯಿತು. ಭಕ್ತಿ, ಸಂಭ್ರಮ ಹಾಗೂ ವೈಭವದ ಸಮ್ಮಿಲನದೊಂದಿಗೆ ನಡೆದ ವಿಸರ್ಜನಾ ಶೋಭಾಯಾತ್ರೆ ಸಾವಿರಾರು ಭಕ್ತರ ಮನಸೂರೆಗೊಂಡಿತು. ರಾತ್ರಿ ಸುಮಾರು 7ರಿಂದ 7.30ರ ವೇಳೆಗೆ ಗಣೇಶನಿಗೆ ಮಹಾಮಂಗಳಾರತಿ ನೆರವೇರಿಸಿದ ಬಳಿಕ, ವಿಶೇಷವಾಗಿ ಅಲಂಕರಿಸಲಾಗಿದ್ದ ವಾಹನದಲ್ಲಿ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಆರಂಭಗೊಂಡ ಶೋಭಾಯಾತ್ರೆಯಲ್ಲಿ ಮೊಳಗಿದ ‘ಗಣಪತಿ ಬಪ್ಪಾ ಮೋರೆಯಾ’ ಘೋಷಣೆಗಳು ವಾತಾವರಣವನ್ನು ಭಕ್ತಿಮಯಗೊಳಿಸಿದವು. […]

ಉಡುಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಚೆಸ್: ಸೆ.27ರಂದು ಕುಂದಾಪುರ, ಅ.4ರಂದು ಬೈಂದೂರು

ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಉಡುಪಿ ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳಲ್ಲಿ ಚೆಸ್ ಪಂದ್ಯಾಟ ಆಯೋಜಿಸಲಾಗಿದೆ.ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾರ್ಗದರ್ಶನದಲ್ಲಿ ಈ ಚೆಸ್ ಪಂದ್ಯಾಟ ನಡೆಯಲಿದೆ.ಸೆ. 27ರಂದುಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಹಾಗೂ ಅ. 4ರಂದು ಬೈಂದೂರಿನ ತ್ರಾಸಿ ಅಣ್ಣಪ್ಪಯ್ಯ ಸಭಾ ಭವನದಲ್ಲಿ ನಡೆಯಲಿದೆ. ಎಲ್ಲಾ ಕೇಂದ್ರಗಳಲ್ಲೂ ಬೆಳಿಗ್ಗೆ 8 ಗಂಟೆಗೆ ಪಂದ್ಯ ಆರಂಭಗೊಳ್ಳಲಿದೆ ಎಂದು […]