ಕೋಡಿ ಕಡಲ ತೀರದಲ್ಲಿ ಬೂತಾಯಿ ಮೀನುಗಳ ರಾಶಿ; ಹೆಕ್ಕಿಕೊಳ್ಳಲು ಮುಗಿಬಿದ್ದ ಜನ!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಡಿ ಕಡಲ ತೀರದಲ್ಲಿ ಶನಿವಾರ ಬೃಹತ್ ಪ್ರಮಾಣದಲ್ಲಿ ಬೂತಾಯಿ (ಸಾರ್ಡಿನ್) ಮೀನುಗಳು ಅಲೆಗಳೊಂದಿಗೆ ದಡಕ್ಕೆ ತೇಲಿ ಬಂದಿದ್ದು, ಕಡಲ ತೀರದಲ್ಲಿ ಮೀನಿನ ರಾಶಿಯೇ ಕಂಡುಬಂತು. ಕೋಡಿ ಕಡಲ ತೀರದ ನೂರಾರು ಮೀಟರ್ ಉದ್ದಕ್ಕೂ ಬೂತಾಯಿ ಮೀನುಗಳು ದಡದಲ್ಲಿ ಬಿದ್ದಿದ್ದವು. ಈ ಅಪರೂಪದ ದೃಶ್ಯವನ್ನು ಕಂಡ ಸ್ಥಳೀಯರು ಹಾಗೂ ಸಾರ್ವಜನಿಕರು ಕಡಲ ತೀರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಉಚಿತವಾಗಿ ಮೀನುಗಳನ್ನು ಹೆಕ್ಕಿಕೊಂಡು ಹೋಗಲು ಮುಗಿಬಿದ್ದರು. ಚೀಲ, ಬುಟ್ಟಿ ಸೇರಿದಂತೆ ಸಿಕ್ಕ ಸಿಕ್ಕ ಪಾತ್ರೆಗಳಲ್ಲಿ […]
ರಾಷ್ಟ್ರೀಯ ದಾಖಲೆ ಮುರಿದು ಬೆಳ್ಳಿ ಗೆದ್ದ ಸಾವನ್ ಬರ್ವಾಲ್

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಕ್ರೀಡಾಕೂಟದ ಪುರುಷರ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾರತದ ಸಾವನ್ ಬರ್ವಾಲ್ ಐತಿಹಾಸಿಕ ಸಾಧನೆ ಮಾಡಿದ್ದಾರೆ. 28 ವರ್ಷದ ಸಾವನ್ 2 ಗಂಟೆ 11 ನಿಮಿಷ 36 ಸೆಕೆಂಡ್‌ಗಳಲ್ಲಿ (2:11:36) ಓಟ ಪೂರ್ಣಗೊಳಿಸಿ ಬೆಳ್ಳಿ ಪದಕ ಗೆದ್ದಿದ್ದಾರೆ. ಸ್ಪರ್ಧೆಯ ಕೊನೆಯ ಹಂತದವರೆಗೂ ತೀವ್ರ ಪೈಪೋಟಿ ನೀಡಿದ ಸಾವನ್, ತಮ್ಮ ಅತ್ಯುತ್ತಮ ಪ್ರದರ್ಶನದೊಂದಿಗೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು. ಜಪಾನ್‌ನ ಇಚಿಟಾಕಾ ಯಮಾಶಿತಾ 2:10:51 ಸಮಯದೊಂದಿಗೆ ಚಿನ್ನದ ಪದಕ ಗೆದ್ದರೆ, ಸಾವನ್ ದ್ವಿತೀಯ ಸ್ಥಾನ ಪಡೆದರು. […]
