ಪ್ರಿಯದರ್ಶಿನಿ ಸೊಸೈಟಿ ರಾಜ್ಯಾದ್ಯಂತ ವಿಸ್ತರಿಸಲಿ: ವಿನಯಕುಮಾರ್ ಸೊರಕೆ

ಐದು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿಯಲ್ಲಿ ಆರಂಭಗೊಂಡ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಲ್ಪಾವಧಿಯಲ್ಲೇ ಉತ್ತಮ ಸಾಧನೆ ಮಾಡಿದ್ದು, ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಸಹಕಾರ ತತ್ವದಡಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ. ಈ ಸೊಸೈಟಿ ರಾಜ್ಯಾದ್ಯಂತ ಶಾಖೆಗಳನ್ನು ತೆರೆದು ಇನ್ನಷ್ಟು ವಿಸ್ತಾರಗೊಳ್ಳಲಿ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಶಿಸಿದರು. ಅವರು ಉಡುಪಿಯ ಸನಿಲ್ ಪ್ಲಾಜಾದಲ್ಲಿ ನೂತನವಾಗಿ ಆರಂಭಗೊಂಡ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಐದನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದ ಮಾಜಿ ಸಚಿವ […]