ಐದು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿಯಲ್ಲಿ ಆರಂಭಗೊಂಡ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಲ್ಪಾವಧಿಯಲ್ಲೇ ಉತ್ತಮ ಸಾಧನೆ ಮಾಡಿದ್ದು, ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಸಹಕಾರ ತತ್ವದಡಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ. ಈ ಸೊಸೈಟಿ ರಾಜ್ಯಾದ್ಯಂತ ಶಾಖೆಗಳನ್ನು ತೆರೆದು ಇನ್ನಷ್ಟು ವಿಸ್ತಾರಗೊಳ್ಳಲಿ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಶಿಸಿದರು.

ಅವರು ಉಡುಪಿಯ ಸನಿಲ್ ಪ್ಲಾಜಾದಲ್ಲಿ ನೂತನವಾಗಿ ಆರಂಭಗೊಂಡ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಐದನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಸೊಸೈಟಿ ಅಧ್ಯಕ್ಷ ಎಚ್. ವಸಂತ್ ಬೆರ್ನಾರ್ಡ್ ಅವರ ನಿಸ್ವಾರ್ಥ ಸೇವೆ ಹಾಗೂ ಕಾರ್ಯದಕ್ಷತೆಯಿಂದ ಸಂಸ್ಥೆ ಉನ್ನತ ಸ್ಥಾನಕ್ಕೇರುತ್ತಿದೆ. ಉದ್ಯೋಗ ಸೃಷ್ಟಿಯ ಮೂಲಕ ಬಡವರ ಬದುಕಿಗೆ ನೆರವಾಗುತ್ತಿರುವ ಸೊಸೈಟಿಯ ಕಾರ್ಯ ಶ್ಲಾಘನೀಯ. ಸರ್ವಜನರ ಕಲ್ಯಾಣದ ಆಶಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.
ಸೇಫ್ ಲಾಕರ್ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಹೊಂದಿರುವ ಜಿಲ್ಲೆಯ ಸಹಕಾರಿ ಸಂಸ್ಥೆಗಳಲ್ಲಿ ಪ್ರಿಯದರ್ಶಿನಿ ಸೊಸೈಟಿಯೂ ಒಂದಾಗಿದೆ. ಸಂಸ್ಥೆ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಶುಭ ಹಾರೈಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಕಂಪ್ಯೂಟರ್ ವ್ಯವಸ್ಥೆಗೆ ಚಾಲನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಬೆಳಪು ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ ಅವರು ಪ್ರಿಯದರ್ಶಿನಿ ಸ್ವಸಹಾಯ ಗುಂಪಿನ ಪ್ರಥಮ ತಂಡದ ಸದಸ್ಯರಿಗೆ ದಾಖಲೆ ಪತ್ರಗಳನ್ನು ಹಸ್ತಾಂತರಿಸಿದರು.
ಮುಲ್ಕಿ ಸೀಮೆಯ ಸಾವಂತ ಅರಸ ಹಾಗೂ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಬಡಗಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಪಡುಕುತ್ಯಾರು ಶ್ರೀ ಸರಸ್ವತಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಬಿ. ಸೂರ್ಯಕುಮಾರ್, ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ, ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ಎಸ್. ರಾವ್, ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಶ್ರೀಧರ್ ದೇವಾಡಿಗ, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಕಾಂಚನ್, ಹೋಮಿಯೋಪಥಿಕ್ ವೈದ್ಯ ಡಾ. ಬೆರಿಲ್ ಎ. ಬೆರ್ನಾರ್ಡ್ ಹಾಗೂ ಕಟ್ಟಡದ ಮಾಲೀಕ ಶಂಭು ಎ. ಸನಿಲ್ ಉಪಸ್ಥಿತರಿದ್ದರು.
ಸೊಸೈಟಿ ಅಧ್ಯಕ್ಷ ಎಚ್. ವಸಂತ್ ಬೆರ್ನಾರ್ಡ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ವಂದಿಸಿದರು. ಶಾಖಾ ಪ್ರಬಂಧಕಿ ನಿಶಾ ಸುಹೈಲ್ ಡೇನಿಯಲ್ ಕಾರ್ಯಕ್ರಮ ನಿರೂಪಿಸಿದರು.
ಸೊಸೈಟಿಯ ನಿರ್ದೇಶಕರಾದ ಉಮಾನಾಥ ಜೆ. ಶೆಟ್ಟಿಗಾರ್, ಧನಂಜಯ ಮಟ್ಟು, ಗೌತಮ್ ಜೈನ್, ಗಣೇಶ್ ಪ್ರಸಾದ್ ದೇವಾಡಿಗ, ಜೈಕೃಷ್ಣ ಕೋಟ್ಯಾನ್, ಡಾ. ಶೆರಿಲ್ ಅಯೋನ ಐಮನ್, ರೇಖಾ ಶೆಟ್ಟಿ, ಹರೀಶ್ ಎನ್. ಪುತ್ರನ್, ನವೀನ್ ಸಾಲ್ಯಾನ್ ಪಂಜ, ಮೋಹನದಾಸ್, ಅನಿಲ್ ಪೂಜಾರಿ ಸಸಿಹಿತ್ಲು, ರಜಿಯಾ ಬಾನು ಹಾಗೂ ಕರಿಯ ಕಾಡಿಗ ಉಪಸ್ಥಿತರಿದ್ದರು.
ಲೆಕ್ಕಿಗರಾದ ಲೋಲಾಕ್ಷಿ ಹಾಗೂ ವಿವಿಧ ಶಾಖೆಗಳ ಪ್ರಬಂಧಕರಾದ ಮೋಹನದಾಸ್, ಪ್ರಜ್ಞಾಶ್ರೀ, ಅಕ್ಷತಾ ಶೆಟ್ಟಿ ಎಂ., ಅಭಿಷ್ಟಾ ಜೈನ್ ಮತ್ತು ಅಂಜಲಿ ಎಸ್. ದೇವಾಡಿಗ ಸಹಕರಿಸಿದರು.
