ಸಾಲಿಗ್ರಾಮ ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಪೇಟಾ ದಾಳಿ

ಸಾಲಿಗ್ರಾಮ ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಪೇಟಾ ದಾಳಿ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಪೇಟಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳ ತಂಡ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ಸುಧೀಂದ್ರ ಐತಾಳ್ ನಡೆಸುತ್ತಿರುವ ಈ ಕೇಂದ್ರದಲ್ಲಿ ನಾಯಿ, ಬೆಕ್ಕುಗಳಿಗೆ ಆಶ್ರಯ ನೀಡಲಾಗುತ್ತಿತ್ತು. ಆದರೆ ಸ್ವಚ್ಛತೆ ಹಾಗೂ ನಿರ್ವಹಣೆ ಕೊರತೆ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಕಾರ್ಯಾಚರಣೆಯಲ್ಲಿ ಪಟ್ಟಣ ಪಂಚಾಯತ್ ಸಿಬ್ಬಂದಿ, ಆರೋಗ್ಯ ಅಧಿಕಾರಿ ಹಾಗೂ ಕೋಟ ಪೊಲೀಸರು ಭಾಗವಹಿಸಿದ್ದರು. ಈ ವೇಳೆ ಗಾಯಗೊಂಡಿದ್ದ ಕೆಲವು ನಾಯಿ ಹಾಗೂ ಬೆಕ್ಕಿನ ಮರಿಗಳನ್ನು ರಕ್ಷಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.