ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ‘ಮಿಥ್ಯ’ಗೆ ಮೂರು ಗೌರವ, ‘ಇಂಬು’ಗೆ ತುಳು ಚಿತ್ರದ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಬುಧವಾರ ಗುಜರಾತ್‌ನ ಏಕ್ತಾ ನಗರದಲ್ಲಿ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ವಿಭಾಗಗಳಲ್ಲಿ ಒಟ್ಟು 92 ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಕನ್ನಡ ಹಾಗೂ ತುಳು ಚಿತ್ರರಂಗದ ಹಲವು ಪ್ರತಿಭೆಗಳನ್ನು ರಾಷ್ಟ್ರಪತಿಗಳ ಸಮ್ಮುಖದಲ್ಲಿ ಗೌರವಿಸಲಾಯಿತು. ಜನಪ್ರಿಯ ನಟ-ನಿರ್ಮಾಪಕ ರಕ್ಷಿತ್ ಶೆಟ್ಟಿ ಒಡೆತನದ ‘ಪರಂವಃ ಪಿಕ್ಚರ್ಸ್’ ಹಾಗೂ ‘ಕೆಆರ್‌ಜಿ ಸ್ಟುಡಿಯೋಸ್’ ಜಂಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮೂರು ಪ್ರಮುಖ ವಿಭಾಗಗಳಲ್ಲಿ ಪ್ರಶಸ್ತಿ ಪಡೆದುಕೊಂಡಿತು. ಸುಮಂತ್ […]
ಬಾಲ್ಯದ ಕ್ಯಾನ್ಸರ್ ಚಿಕಿತ್ಸೆಗೆ ನಿಧಿ ಸಂಗ್ರಹ: ‘ಡ್ರೀಮ್ಸ್ ಆನ್ ವೀಲ್ಸ್ 2.0’ ಬೈಕ್ ಯಾತ್ರೆ

ಬಾಲ್ಯದ ಕ್ಯಾನ್ಸರ್ ಕುರಿತು ಅರಿವು ಮೂಡಿಸುವುದರ ಜೊತೆಗೆ ಚಿಕಿತ್ಸೆಗೆ ನಿಧಿ ಸಂಗ್ರಹಿಸುವ ಉದ್ದೇಶದಿಂದ ಹಿರಿಯ ಪತ್ರಕರ್ತ ಹಾಗೂ ಶೈಕ್ಷಣಿಕ ಹೋರಾಟಗಾರ ಶ್ರೀನಿವಾಸನ್ ನಂದಗೋಪಾಲ್ ಅವರು ‘ಡ್ರೀಮ್ಸ್ ಆನ್ ವೀಲ್ಸ್ 2.0’ ರಾಷ್ಟ್ರಮಟ್ಟದ ಬೈಕ್ ಯಾತ್ರೆ ಕೈಗೊಳ್ಳಲಿದ್ದಾರೆ. ಸೆ.26ರಂದು ಮಂಗಳೂರಿನಿಂದ ಆರಂಭವಾಗಲಿರುವ ಈ ಏಕಾಂಗಿಯ ಬೈಕ್ ಯಾತ್ರೆ ಒಂದು ವರ್ಷದ ಅವಧಿಯಲ್ಲಿ ದೇಶದ 30ಕ್ಕೂ ಹೆಚ್ಚು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮೂಲಕ 30,000 ಕಿ.ಮೀ.ಗೂ ಅಧಿಕ ದೂರ ಸಾಗಲಿದೆ. ತಿರುವನಂತಪುರಂ, ಚೆನ್ನೈ, ಹೈದರಾಬಾದ್, ಒಡಿಶಾ, ಪಶ್ಚಿಮ ಬಂಗಾಳ, […]
ಕರಾವಳಿ ಕಥೆಗೆ ಹೊಸ ಸ್ಪರ್ಶ: ನವೆಂಬರ್‌ನಲ್ಲಿ ಸೂಚನ್ ಶೆಟ್ಟಿ ನಿರ್ದೇಶನದ ‘ಗಾಡ್ ಪ್ರಾಮಿಸ್’ ರಿಲೀಸ್

ಕರಾವಳಿಯ ಮಣ್ಣಿನಲ್ಲಿ ಹುಟ್ಟಿದ ಕಥೆಯೊಂದು ಇದೀಗ ಬೆಳ್ಳಿತೆರೆಯ ಮೇಲೆ ತನ್ನದೇ ಹೆಜ್ಜೆ ಗುರುತು ಮೂಡಿಸಲು ಸಿದ್ಧವಾಗಿದೆ. ‘ಗಾಡ್ ಪ್ರಾಮಿಸ್’ ಮೂಲಕ ಒಂದು ಹೊಸ ತಂಡದ ಹೊಸ ಕನಸೊಂದು ನವೆಂಬರ್‌ನಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ. ಕರಾವಳಿಯ ಮಣ್ಣಿಗೆ ತನ್ನದೇ ಆದ ಕಥೆಗಳಿವೆ. ಇಲ್ಲಿನ ಬದುಕಿಗೆ ತನ್ನದೇ ಆದ ಬಣ್ಣವಿದೆ. ಸಂಬಂಧಗಳಿಗೆ ಭಾವನೆಗಳಿವೆ. ಸಂಸ್ಕೃತಿಗೆ ತನ್ನದೇ ಆದ ಸೊಗಡಿದೆ. ಈ ಎಲ್ಲವನ್ನೂ ಬೆಳ್ಳಿತೆರೆಗೆ ತರುವ ಪ್ರಯತ್ನಗಳು ನಡೆದಾಗಲೆಲ್ಲಾ ಕನ್ನಡ ಸಿನಿರಂಗದಲ್ಲಿ ಹೊಸ ಕುತೂಹಲ ಹುಟ್ಟುತ್ತದೆ. ಇದೀಗ ಅಂತಹದ್ದೇ ಒಂದು ಹೊಸ […]
AI ಯುಗದ ಯುವಕನ ಕಥೆ ‘ಲಂಬೋದರ 2.0’: ಬೆಳ್ಳಿತೆರೆಗೆ ಜಿಯಾ ರೋಬೋಟ್ ಎಂಟ್ರಿ

ನಿರ್ದೇಶಕ ಸಿಂಪಲ್ ಸುನಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ಲಂಬೋದರ 2.0’ ಚಿತ್ರ ಹೊಸತನದ ಕಥಾಹಂದರದೊಂದಿಗೆ ಗಮನ ಸೆಳೆಯುತ್ತಿದೆ. ವಿಶೇಷವೆಂದರೆ, ಬೆಂಗಳೂರಿನ ಮಚಾನಿ ರೋಬೋಟಿಕ್ಸ್ ಅಭಿವೃದ್ಧಿಪಡಿಸಿರುವ ‘ಜಿಯಾ’ ಎಂಬ ನೈಜ ಹ್ಯೂಮನಾಯ್ಡ್ ರೋಬೋಟ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದೆ. ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಸೈನ್ಸ್‌ಫಿಕ್ಷನ್ ಹಾಗೂ ಸೋಶಿಯಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಬೆಂಗಳೂರಿನ ಯುವಕನೊಬ್ಬನ ಬದುಕಿನ ಸುತ್ತ ಕಥೆ ಸಾಗಲಿದ್ದು, ಆತನ ಜೀವನದಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಹೇಗೆ ಪ್ರವೇಶಿಸುತ್ತದೆ ಎಂಬುದನ್ನು ಸಿನಿಮಾ ಅನಾವರಣಗೊಳಿಸಲಿದೆ. […]
ಪ್ರಧಾನಿ ಮೋದಿಗೆ ಯಕ್ಷಗಾನ ರಾಜಕಿರೀಟ ತೊಡಿಸಿ ಸನ್ಮಾನಿಸಿದ ಪೇಜಾವರ ಶ್ರೀ

ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಐತಿಹಾಸಿಕ ಇಂದ್ರಪ್ರಸ್ಥ ಚಾತುರ್ಮಾಸ್ಯ ವ್ರತ ಸಮಾಪ್ತಿಗೆ ಕೆಲವೇ ದಿನಗಳು ಬಾಕಿಯಿರುವ ಸಂದರ್ಭದಲ್ಲಿ, ಮಂಗಳವಾರ ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಪ್ರಧಾನಿ ಮೋದಿ ಅವರು ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಆತ್ಮೀಯವಾಗಿ ಬರಮಾಡಿಕೊಂಡು ಉಭಯ ಕುಶಲೋಪರಿ ವಿಚಾರಿಸಿದರು. ಈ ವೇಳೆ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ್ಮಶತಮಾನೋತ್ಸವವನ್ನು 2031ರಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಪೇಜಾವರ ಮಠದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪಂಚವಾರ್ಷಿಕ ಯೋಜನೆಯ ಲಾಂಛನವನ್ನು ಪ್ರಧಾನಿ ನರೇಂದ್ರ […]
ಮಂಗಳೂರಿನ ಸಂಪುಟ ಸಭೆ ಕರಾವಳಿ ಅಭಿವೃದ್ಧಿಗೆ ಹೊಸ ಮುನ್ನುಡಿ: ಪ್ರಸಾದ್ ರಾಜ್ ಕಾಂಚನ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳು ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಕರಾವಳಿಗರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಭೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಕರಾವಳಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಗರಿಮೆ […]
ಕಾನ್ಪುರದಲ್ಲಿ ವಿಮಾನ ಪತನ: ಉಡುಪಿ ಮೂಲದ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಗುರುವಾರ ತರಬೇತಿ ವಿಮಾನ ಪತನಗೊಂಡು ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದಾಗಿ ತಿಳೀದು ಬಂದಿದೆ.ಆ.27ರಂದು ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡಿದ್ದು, ಮೃತರಲ್ಲಿ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಅಭಿಷೇಕ್ ಪೂಜಾರಿ ಅವರೂ ಸೇರಿದ್ದಾರೆ ಎನ್ನಲಾಗಿದೆ. ಅಭಿಷೇಕ್ ಪೂಜಾರಿ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು ಎಂದು ಕುಟುಂಬದ […]
5 ವರ್ಷದ ಬಳಿಕ ವಿಕ್ರಂ ರವಿಚಂದ್ರನ್ ಗ್ರ್ಯಾಂಡ್ ಕಮ್‌ಬ್ಯಾಕ್:‘ಗುಚ್ಚಿ ಗರ್ಲ್’ಗೆ ಭರ್ಜರಿ ರೆಸ್ಪಾನ್ಸ್

ನಟ ವಿಕ್ರಂ ರವಿಚಂದ್ರನ್ ಸುದೀರ್ಘ ಐದು ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳ ಮುಂದೆ ಬಂದಿದ್ದಾರೆ. ತಮ್ಮ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ತಮ್ಮ ಬಹುನಿರೀಕ್ಷಿತ ಸಿನಿಮಾ ‘ಮುಧೋಳ್’ ಚಿತ್ರದ ಮೊದಲ ಹಾಡು ‘ಗುಚ್ಚಿ ಗರ್ಲ್’ ಅನ್ನು ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಹಾಡು ಬಿಡುಗಡೆಯೊಂದಿಗೆ ‘ಮುಧೋಳ್’ ಸಿನಿಮಾದ ಮೇಲಿನ ಕುತೂಹಲವೂ ಹೆಚ್ಚಾಗಿದೆ. ಸ್ಯಾಂಡಲ್‌ವುಡ್‌ನ ಶೋಮ್ಯಾನ್ ಖ್ಯಾತಿಯ ನಿರ್ದೇಶಕ ಪ್ರೇಮ್ ‘ಗುಚ್ಚಿ ಗರ್ಲ್’ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೇಮ್, […]
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಭೇಟಿ

ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ಮಠದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಅವರು ಕನಕ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದರು. ನಂತರ ದೇಗುಲದ ಒಳಾಂಗಣಕ್ಕೆ ತೆರಳಿದ ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು, ವಿಶೇಷ ಪೂಜೆ ಹಾಗೂ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಈ ವೇಳೆ ಮಠದ ವತಿಯಿಂದ ಅವರಿಗೆ ಪ್ರಸಾದ ಹಾಗೂ ಗೌರವಾರ್ಪಣೆ […]
ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನದ ಸ್ನಾನ ಘಟ್ಟ ಲೋಕಾರ್ಪಣೆ: ಸ್ವರ್ಣಾ ನದಿಗೆ ಬಾಗಿನ ಅರ್ಪಿಸಿದ ಯಶ್‌ಪಾಲ್ ಸುವರ್ಣ

ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟವು ಹಲವು ವರ್ಷಗಳಿಂದ ನದಿ ಕೊರೆತದಿಂದ ಹಾನಿಗೊಳಗಾಗಿತ್ತು. ಪ್ರತಿವರ್ಷ ಕೃಷ್ಣಾಂಗಾರಕ ಚತುರ್ದಶಿಯ ಸಂದರ್ಭದಲ್ಲಿ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ತೀರ್ಥಸ್ನಾನಕ್ಕಾಗಿ ದೇವಸ್ಥಾನಕ್ಕೆ ಆಗಮಿಸುತ್ತಿದ್ದು, ಸೂಕ್ತ ಮೂಲಸೌಕರ್ಯದ ಕೊರತೆಯಿಂದಾಗಿ ಭಕ್ತರಿಗೆ ಸಾಕಷ್ಟು ತೊಂದರೆ ಎದುರಾಗುತ್ತಿತ್ತು. ಮೂಡು ಪೆರಂಪಳ್ಳಿ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ಆವರಣದಲ್ಲಿ ₹2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ನೂತನ ನದಿ ಸ್ನಾನ ಘಟ್ಟವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಸ್ವರ್ಣಾ ನದಿಗೆ ಬಾಗಿನ […]
