ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶ್ವಾಸಕೋಶ ಕ್ಯಾನ್ಸರ್ ಗೆ ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆ
ಆರೋಗ್ಯ ಕ್ಷೇತ್ರದಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಅತ್ಯಂತ ಸಂಕೀರ್ಣ ಮತ್ತು ಅಪರೂಪದ ಶ್ವಾಸನಾಳ ಕ್ಯಾನ್ಸರ್‌ಗೆ ಸಂಬಂಧಿಸಿದ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಕಡಿಮೆ ನೋವು, ವೇಗವಾದ ಚೇತರಿಕೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ನಡೆದ ಈ ಶಸ್ತ್ರಚಿಕಿತ್ಸೆ ಇದೀಗ ರಾಜ್ಯದ ಗಮನ ಸೆಳೆದಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 36 ವರ್ಷದ ವ್ಯಕ್ತಿಯ ಶ್ವಾಸನಾಳದ ಕೆಳಭಾಗದಲ್ಲಿ ಕ್ಯಾನ್ಸರ್ ಗೆಡ್ಡೆ ಇರುವುದನ್ನು ಎಂಡೋಸ್ಕೋಪಿ ಪರೀಕ್ಷೆಯಲ್ಲಿ ಪತ್ತೆ […]
ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ..!

ಮನೆ ನೋಂದಣಿ ಮಾಡಿಕೊಡುವಂತೆ ನೀಡಿದ್ದ ಗ್ರಾಹಕ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ಉದ್ಯಮಿ, ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಗೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಮಹತ್ವದ ಆದೇಶ ಹೊರಡಿಸಿದೆ. ಡಿಕ್ರಿ ಹೋಲ್ಡರ್ ಸಂತೋಷ್ ಪೈ ಅವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮುಂದೆ ಸಿ.ಸಿ. ನಂ. 76/2023ರಂತೆ ದಾವೆ ಹೂಡಿದ್ದರು. […]
ಉಡುಪಿಯ ಕುವರಿ ಸುಹಾನಿಗೆ “ಮಿಸ್ಸಿ ಕರ್ನಾಟಕ 2026” ಕಿರೀಟ

ಸಿಜ್ಲಿಂಗ್ ಗೈಸ್ ಫ್ಯಾಷನ್ ಮ್ಯಾನೇಜ್‌ಮೆಂಟ್ ಮತ್ತು ಹೆವೆನ್ ರೋಸ್ ಜಂಟಿಯಾಗಿ ಆಯೋಜಿಸಿದ ‘ಮಿಸ್ಸಿ, ಟೀನ್, ಮಿಸ್ಟರ್ ಮತ್ತು ಮಿಸ್ ಕರ್ನಾಟಕ’ ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಸುಹಾನಿ ಕುಕ್ಕಿಕಟ್ಟೆ ಅವರು “ಮಿಸ್ಸಿ ಕರ್ನಾಟಕ 2026” ಕಿರೀಟವನ್ನು ಮುಡಿಗೇರಿಸಿಕೊಂಡರು. ಮಂಗಳೂರಿನ ಪಾಂಡೇಶ್ವರದಲ್ಲಿರುವ ಫಿಜಾ ಬೈ ನೆಕ್ಸಸ್ ಮಾಲ್ ನಲ್ಲಿ ನಡೆದ 5 ರಿಂದ 12 ವರ್ಷದ ಒಳಗಿನ ವಿಭಾಗದಲ್ಲಿ ನಡೆದ ಈ ಸೌಂದರ್ಯ ಸ್ಪರ್ಧೆಯಲ್ಲಿ, ಬೆಂಗಳೂರು, ಶಿವಮೊಗ್ಗ, ತೀರ್ಥಹಳ್ಳಿ ಮತ್ತು ಉಡುಪಿ ಭಾಗಗಳಿಂದ ಒಟ್ಟು 14 ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧೆಯು […]
ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ: ಡಿವೈಡರ್‌ಗೆ ಡಿಕ್ಕಿ, ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್)ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಕೆ.ಎಫ್.ಸಿ. ಸಮೀಪ ಗುರುವಾರ ನಡೆದಿದೆ. ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದ್ದು, ಅಪಘಾತದ ವೇಳೆ ಬಸ್ಸಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಘಟನೆ ಸಂಭವಿಸಿದ ಪರಿಣಾಮ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ಬಸ್ ಹಾಗೂ ರಸ್ತೆ ವಿಭಾಜಕಕ್ಕೆ ಹಾನಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಣಿಪಾಲ ಪೊಲೀಸರು ಸ್ಥಳಕ್ಕೆ […]
ಜೂ.28: ಉಡುಪಿ ಯಕ್ಷಗಾನ ಕಲಾರಂಗದಿಂದ ‘ಸೂರು ನೂರರ ಸಡಗರ’

ಉಡುಪಿ ಯಕ್ಷಗಾನ ಕಲಾರಂಗದ ‘ವಿದ್ಯಾಪೋಷಕ್’ ಯೋಜನೆಯಡಿಯಲ್ಲಿ 100ರ ಮನೆ ಹಸ್ತಾಂತರ ಹಾಗೂ ಸೂರು ನೂರರ ಸಡಗರ ಕಾರ್ಯಕ್ರಮವನ್ನು ಜೂ. 28ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಉಡುಪಿ ಯಕ್ಷಗಾನ ಕಲಾರಂಗವು ಕಳೆದ 26 ವರ್ಷಗಳಿಂದ ಯಕ್ಷನಿಧಿಯ ಮೂಲಕ ಕಲಾವಿದರ ಕಲ್ಯಾಣಕ್ಕಾಗಿ ಹಾಗೂ 22 ವರ್ಷಗಳಿಂದ ವಿದ್ಯಾಪೋಷಕ್ ಯೋಜನೆಯಡಿ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸೇರಿದಂತೆ […]
ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಪ್ರಧಾನಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಯಶಸ್ವಿಯಾಗಿ 4400 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಗುರುವಾರ ಕಟಪಾಡಿಯ ವಿಶ್ವನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಇದೇ […]
ಪುತ್ತೂರು: ಯುವತಿಗೆ ವಂಚನೆ ಪ್ರಕರಣ: ರಾಜೀ ಸಂಧಾನಕ್ಕೆ ಹಾಜರಾಗಲು ಆರೋಪಿ ಕೃಷ್ಣ ರಾವ್ ಗೆ ಹೈಕೋರ್ಟ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾಪವನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಗೆ ತಡೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಬುಧವಾರ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ನಡೆಯಿತು. ವಿಚಾರಣೆ ವೇಳೆ ಆರೋಪಿ ಪರ ಹಾಜರಾಗಿದ್ದ […]
