ಕಾಪು: ಟೈಮಿಂಗ್ ವಿಚಾರಕ್ಕೆ ಖಾಸಗಿ ಬಸ್ ಸಿಬ್ಬಂದಿಗಳ ಘರ್ಷಣೆ – ನಾಲ್ವರ ಬಂಧನ, ಎರಡು ಬಸ್ ವಶ – Copy

ಬಸ್ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಕಾಪು ಪೇಟೆಯಲ್ಲಿ ಎರಡು ಖಾಸಗಿ ಬಸ್ಗಳ ಚಾಲಕರು ಹಾಗೂ ಕಂಡಕ್ಟರ್ಗಳ ನಡುವೆ ಘರ್ಷಣೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಸ್ ಚಾಲಕರಾದ ರಮೇಶ್ ಮತ್ತು ಅಭಿಷೇಕ್ ಹಾಗು ನಿರ್ವಾಹಕರಾದ ವಿಜಯಕುಮಾರ್ ಹಾಗೂ ಹರೀಶ್ ಬಿ. ಹೆಗ್ಡೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಗೆ ಸಂಬಂಧಿಸಿದ ಎರಡೂ ಬಸ್ಗಳನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಕಾಪು ಪೊಲೀಸರು ತಿಳಿಸಿದ್ದಾರೆ.
ಕಾಪು: ಟೈಮಿಂಗ್ ವಿಚಾರಕ್ಕೆ ಖಾಸಗಿ ಬಸ್ ಸಿಬ್ಬಂದಿಗಳ ಘರ್ಷಣೆ – ನಾಲ್ವರ ಬಂಧನ, ಎರಡು ಬಸ್ ವಶ

ಬಸ್ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಕಾಪು ಪೇಟೆಯಲ್ಲಿ ಎರಡು ಖಾಸಗಿ ಬಸ್ಗಳ ಚಾಲಕರು ಹಾಗೂ ಕಂಡಕ್ಟರ್ಗಳ ನಡುವೆ ಘರ್ಷಣೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಸ್ ಚಾಲಕರಾದ ರಮೇಶ್ ಮತ್ತು ಅಭಿಷೇಕ್ ಹಾಗು ನಿರ್ವಾಹಕರಾದ ವಿಜಯಕುಮಾರ್ ಹಾಗೂ ಹರೀಶ್ ಬಿ. ಹೆಗ್ಡೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಗೆ ಸಂಬಂಧಿಸಿದ ಎರಡೂ ಬಸ್ಗಳನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಕಾಪು ಪೊಲೀಸರು ತಿಳಿಸಿದ್ದಾರೆ.
ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕನ ಬಂಧನ: 1.52ಲಕ್ಷದ ಸೊತ್ತು ವಶ

ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲದ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಮಾಡುತ್ತಿದ್ದ ಆರೋಪದಡಿ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ ಹಾಗೂ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ಮೂಲದ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂಬಾತನನ್ನು ಬಂಧಿಸಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆ […]
ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ..!

ಮನೆ ನೋಂದಣಿ ಮಾಡಿಕೊಡುವಂತೆ ನೀಡಿದ್ದ ಗ್ರಾಹಕ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ಉದ್ಯಮಿ, ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಗೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಮಹತ್ವದ ಆದೇಶ ಹೊರಡಿಸಿದೆ. ಡಿಕ್ರಿ ಹೋಲ್ಡರ್ ಸಂತೋಷ್ ಪೈ ಅವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮುಂದೆ ಸಿ.ಸಿ. ನಂ. 76/2023ರಂತೆ ದಾವೆ ಹೂಡಿದ್ದರು. […]
ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ: ಡಿವೈಡರ್ಗೆ ಡಿಕ್ಕಿ, ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್)ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಕೆ.ಎಫ್.ಸಿ. ಸಮೀಪ ಗುರುವಾರ ನಡೆದಿದೆ. ಅಲ್-ಇಬಾದಾದ್ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ ಇದಾಗಿದ್ದು, ಅಪಘಾತದ ವೇಳೆ ಬಸ್ಸಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಘಟನೆ ಸಂಭವಿಸಿದ ಪರಿಣಾಮ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ಬಸ್ ಹಾಗೂ ರಸ್ತೆ ವಿಭಾಜಕಕ್ಕೆ ಹಾನಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಣಿಪಾಲ ಪೊಲೀಸರು ಸ್ಥಳಕ್ಕೆ […]
ಪುತ್ತೂರು: ಯುವತಿಗೆ ವಂಚನೆ ಪ್ರಕರಣ: ರಾಜೀ ಸಂಧಾನಕ್ಕೆ ಹಾಜರಾಗಲು ಆರೋಪಿ ಕೃಷ್ಣ ರಾವ್ ಗೆ ಹೈಕೋರ್ಟ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾಪವನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಗೆ ತಡೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಬುಧವಾರ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ನಡೆಯಿತು. ವಿಚಾರಣೆ ವೇಳೆ ಆರೋಪಿ ಪರ ಹಾಜರಾಗಿದ್ದ […]
