ರೆಸಾರ್ಟ್‌ನಲ್ಲಿ ಅಂದರ್-ಬಾಹರ್ ಜೂಜಾಟಕ್ಕೆ ದಾಳಿ: 26 ಮಂದಿ ಬಂಧನ, ₹17.81 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ರೆಸಾರ್ಟ್‌ನ ಕೊಠಡಿಗೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹1,31,630 ನಗದು, ಇಸ್ಪೀಟ್ ಎಲೆಗಳು, ಅಂದಾಜು ₹2 ಲಕ್ಷ ಮೌಲ್ಯದ 25 ಮೊಬೈಲ್ ಫೋನ್‌ಗಳು, […]

ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನನ್ನು ಅಪಹರಿಸಿ ಕೇರಳದ ವುಡ್ ಕಂಪನಿಯಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಟಪಾಡಿ ನಿವಾಸಿ ಸುಚಿತ್ ನಾಯಕ್ ಮತ್ತು ವಾರಂಬಳ್ಳಿ ನಿವಾಸಿ ವಿಖ್ಯಾತ್ ಆಚಾರ್ಯ ಬಂಧಿತರು.ಮಟಪಾಡಿ ಗ್ರಾಮದ ತಾರೇಶ್ (38) ಅವರ ಪುತ್ರ ತಿಲಕ್ (ಹೆಸರು ಬದಲಿಸಲಾಗಿದೆ), ಬ್ರಹ್ಮಾವರ ಸರ್ಕಾರಿ ಬೋರ್ಡ್ ಹೈಸ್ಕೂಲ್‌ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಜೂನ್ 1ರಂದು ಬೆಳಿಗ್ಗೆ ಸುಮಾರು 8.30ಕ್ಕೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಬಾಲಕನನ್ನು […]

ಉಡುಪಿ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಪ್ರತಿಷ್ಠಿತ DG & IGP Commendation Disc ಪ್ರಶಸ್ತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 2025–2026ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಕಮೆಂಡೇಶನ್ ಡಿಸ್ಕ್ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯ ಎ.ಎಸೈ ರಾಜೇಶ್ ಪಿ., ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ARSI ಸುಧಾಕರ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ನಾಗರಾಜ್ ಪ್ರಭು ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಶಿವಕುಮಾರ್ ಎಚ್. ಎಂ. ಪ್ರಶ್ಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ತವ್ಯದ ಮೇಲಿನ ನಿಷ್ಠೆ, […]

ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ: ಡಿವೈಡರ್‌ಗೆ ಡಿಕ್ಕಿ, ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್)ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಕೆ.ಎಫ್.ಸಿ. ಸಮೀಪ ಗುರುವಾರ ನಡೆದಿದೆ. ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದ್ದು, ಅಪಘಾತದ ವೇಳೆ ಬಸ್ಸಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಘಟನೆ ಸಂಭವಿಸಿದ ಪರಿಣಾಮ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ಬಸ್ ಹಾಗೂ ರಸ್ತೆ ವಿಭಾಜಕಕ್ಕೆ ಹಾನಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಣಿಪಾಲ ಪೊಲೀಸರು ಸ್ಥಳಕ್ಕೆ […]

ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಪ್ರಧಾನಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಯಶಸ್ವಿಯಾಗಿ 4400 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಗುರುವಾರ ಕಟಪಾಡಿಯ ವಿಶ್ವನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಇದೇ […]