ರೆಸಾರ್ಟ್‌ನಲ್ಲಿ ಅಂದರ್-ಬಾಹರ್ ಜೂಜಾಟಕ್ಕೆ ದಾಳಿ: 26 ಮಂದಿ ಬಂಧನ, ₹17.81 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ರೆಸಾರ್ಟ್‌ನ ಕೊಠಡಿಗೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹1,31,630 ನಗದು, ಇಸ್ಪೀಟ್ ಎಲೆಗಳು, ಅಂದಾಜು ₹2 ಲಕ್ಷ ಮೌಲ್ಯದ 25 ಮೊಬೈಲ್ ಫೋನ್‌ಗಳು, […]

ರೆಸಾರ್ಟ್‌ನಲ್ಲಿ ಅಂದರ್-ಬಾಹರ್ ಜೂಜಾಟಕ್ಕೆ ದಾಳಿ: 26 ಮಂದಿ ಬಂಧನ, ₹17.81 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ರೆಸಾರ್ಟ್‌ನ ಕೊಠಡಿಗೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹1,31,630 ನಗದು, ಇಸ್ಪೀಟ್ ಎಲೆಗಳು, ಅಂದಾಜು ₹2 ಲಕ್ಷ ಮೌಲ್ಯದ 25 ಮೊಬೈಲ್ ಫೋನ್‌ಗಳು, […]

ಉಡುಪಿಯಲ್ಲಿ ಶಾಲಾ ಬಸ್ ಗಳ ತಪಾಸಣೆ…!

ಉಡುಪಿ ಹಾಗೂ ಮಣಿಪಾಲದ ಠಾಣಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಖಾಸಗಿ ಶಾಲಾ ಬಸ್ ಗಳನ್ನು ಇಂದು ಪೊಲೀಸರು ದಿಢೀರ್ ದಿಢೀರ್ ತಪಾಸಣೆಗೆ ಒಳಪಡಿಸಿದ್ದಾರೆ. ಇತ್ತೀಚೆಗೆ ಶಾಲಾ ಬಸ್‌ಗಳ ಅಪಘಾತ ಪ್ರಕರಣಗಳು ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪೊಲೀಸರು ಶಾಲಾ ವಾಹನಗಳನ್ನು ಪರಿಶೀಲಿಸಿದರು. ತಪಾಸಣೆ ವೇಳೆ ಬಸ್‌ಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ, ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸಾಗಿಸಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದರು. ಇದರ […]

ಬಾಂಬ್ ಬೆದರಿಕೆ ಹಿನ್ನೆಲೆ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಿಗಿ ಭದ್ರತೆ, ಕಟ್ಟುನಿಟ್ಟಿನ ತಪಾಸಣೆ

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಬಾಂಬ್ ಬೆದರಿಕೆ ಇ-ಮೇಲ್‌ಗಳು ಹಾಗೂ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ನ್ಯಾಯಾಲಯದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದೆ. ನ್ಯಾಯಾಲಯದ ದೈನಂದಿನ ಕಲಾಪಗಳು ಯಾವುದೇ ಅಡಚಣೆಯಿಲ್ಲದೆ ನಡೆಯುವಂತೆ ಹಾಗೂ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವ ಉದ್ದೇಶದಿಂದ ಪ್ರತಿದಿನ ಬೆಳಗ್ಗೆ ನ್ಯಾಯಾಲಯ ಆರಂಭವಾಗುವ ಮುನ್ನ ಸಂಪೂರ್ಣ ಕೋರ್ಟ್ ಆವರಣದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಹಾಗೂ ಬಾಂಬ್ ಪತ್ತೆ ಮತ್ತು […]

ಪೆರ್ಡೂರು ಸಂಜೀವಿನಿ ಒಕ್ಕೂಟದಲ್ಲಿ 23 ಲಕ್ಷ ರೂ. ವಂಚನೆ: ದಂಪತಿ ಬಂಧನ

ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಸುಮಾರು ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿ ಮತ್ತು ಆಕೆಯ ಪತಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್ ಎಂದು ಗುರುತಿಸಲಾಗಿದೆ. ಸುಗಂಧಿ ಅವರು 2023ರಿಂದ 2025ರವರೆಗೆ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಮೊತ್ತವನ್ನು […]

ರಹಸ್ಯ ವೀಡಿಯೋ ಲೀಕ್ ಮಾಡುವ ಬ್ಲಾಕ್ ಮೇಲ್: ಮಹಿಳೆಯ ಬಂಧನ

ರಿಯಲ್ ಎಸ್ಟೇಟ್ ವ್ಯವಹಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ ನಡೆಸಿ, ಬಳಿಕ ಹಣ ಕೇಳಿದ ವ್ಯಕ್ತಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದಡಿ ಮಹಿಳೆಯೊಬ್ಬರನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಡುಬಿದ್ರೆಯ ಕಂಚಿನಡ್ಕ ನಿವಾಸಿ ಜೀನತ್ ಇಬ್ರಾಹಿಂ ಬಂಧಿತ ಮಹಿಳೆ. ಉಡುಪಿ ಮೂಲದ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿತೆಯನ್ನು ವಶಕ್ಕೆ ಪಡೆದಿದ್ದಾರೆ. ದೂರುದಾರರು ಮತ್ತು ಮಹಿಳೆ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ನಡೆಸುತ್ತಿದ್ದರು. ಈ ವೇಳೆ […]

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ.ವಿದ್ಯಾರ್ಥಿನಿ ನಿಖಿತಾ (19) ಆತ್ಮಹತ್ಯೆ ಮಾಡಿಕೊಂಡವರು. ಜುಲೈ 1 ರಂದು ಬೆಳಿಗ್ಗೆ ನಿಖಿತಾ ಅವರ ತಾಯಿ ಕೆಲಸದ ನಿಮಿತ್ತ ಹೊರಗೆ ತೆರಳಿದ್ದ ವೇಳೆ, ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬಳಿಕ ಸ್ಥಳೀಯರು ಗಮನಿಸಿ ಕುಟುಂಬಸ್ಥರು […]

ಉಡುಪಿಯಲ್ಲಿ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್ ಪೋಲಿಯೋ […]

ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯ ಶವ ಪತ್ತೆ

ಉಡುಪಿಯ ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಯಾಜ್ ಅವರು ನದಿಯ ಬಳಿ ಇದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ […]

ಉಡುಪಿ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ; ಪೊಲೀಸರು, ಶ್ವಾನದಳದಿಂದ ಪರಿಶೀಲನೆ

ಉಡುಪಿ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ನ್ಯಾಯಾಲಯದ ಆಡಳಿತಕ್ಕೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಉಡುಪಿ ನಗರ ಠಾಣೆಯ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ನ್ಯಾಯಾಲಯದ ಆವರಣದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ನ್ಯಾಯಾಲಯದ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅನುಮಾನಾಸ್ಪದ ವಸ್ತುಗಳಿಗಾಗಿ ಸಂಪೂರ್ಣ ಪರಿಶೀಲನೆ ಕೈಗೊಳ್ಳಲಾಗಿದೆ. ಗಮನಾರ್ಹವಾಗಿ, ಕೇವಲ ಐದು ದಿನಗಳ ಹಿಂದೆಯೂ “ಸಹನಾ” ಎಂಬ ಹೆಸರಿನ ಇಮೇಲ್ ಐಡಿಯಿಂದ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಆ ವೇಳೆ […]