SASS ಉಡುಪಿ ಜಿಲ್ಲಾ ಘಟಕಕ್ಕೆ “ಪ್ರಭಾವಿ ಜಿಲ್ಲೆ” ಗೌರವ

SASS ಉಡುಪಿ ಜಿಲ್ಲಾ ಘಟಕಕ್ಕೆ “ಪ್ರಭಾವಿ ಜಿಲ್ಲೆ” ಗೌರವ

ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (SASS) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಹೋಟೆಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ಉಡುಪಿ ತಾಲೂಕು SASS ಸಮಿತಿ ಮತ್ತು ಕುಂದಾಪುರ ತಾಲೂಕು ಮಹಿಳಾ SASS ಸಮಿತಿಯ ಪದಗ್ರಹಣ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ SASS ರಾಷ್ಟ್ರೀಯ ಅನ್ನದಾನ ಸಮಿತಿಯ ಅಧ್ಯಕ್ಷ ಟಿ. ಬಿ. ಶೇಖರ್‌ಜಿ ಅವರು ಮಾತನಾಡಿ, “SASSನ ಒಂದು ಜಿಲ್ಲಾ ಘಟಕ ಹೊಂದಿರಬೇಕಾದ ಸಂಘಟನಾ ವ್ಯವಸ್ಥೆ, ಸೇವಾ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಕ್ರಮಗಳನ್ನು ಉಡುಪಿ ಜಿಲ್ಲಾ ಘಟಕವು ಮಾದರಿಯಾಗಿ ನಿರ್ವಹಿಸುತ್ತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಘಟಕವನ್ನು “ಪ್ರಭಾವಿ ಜಿಲ್ಲೆ” ಎಂದು ಘೋಷಿಸಿದರು.

ಸಭೆಯಲ್ಲಿ SASS ದಕ್ಷಿಣ ಪ್ರಾಂತ ಕಾರ್ಯದರ್ಶಿ ಕೃಷ್ಣಯ್ಯಜಿ, ರಾಜ್ಯಾಧ್ಯಕ್ಷ ಜಯರಾಮ್‌ಜಿ, ರಾಜ್ಯ ಸಂಘಟನಾ ಕಾರ್ಯದರ್ಶಿ ದತ್ತಾತ್ರೇಯ ಶಿಂತ್ರೆ, ಜಿಲ್ಲಾ ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಗೌರವ ಸಲಹೆಗಾರ ದಿವಾಕರ್ ಶೆಟ್ಟಿ, ರಾಜ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ್ ಕುಮಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಜಿಲ್ಲಾ SASS ಅಧ್ಯಕ್ಷ ರಾಧಾಕೃಷ್ಣ ಮೆಂಡನ್, ಉಪಾಧ್ಯಕ್ಷರಾದ ಕೆ. ವಿಜಯ ಕೊಡವೂರು ಹಾಗೂ ಗೋಪಾಲ್ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ತಾರಾ ಯು. ಆಚಾರ್ಯ, ಪ್ರಧಾನ ಕಾರ್ಯದರ್ಶಿ ತಾರಾ ಸತೀಶ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು SASS ನೂತನ ಅಧ್ಯಕ್ಷರಾಗಿ ಸತೀಶ್ ಕುಲಾಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಥ್ ಆಚಾರ್ಯ, ಕುಂದಾಪುರ ತಾಲೂಕು ಮಹಿಳಾ SASS ಘಟಕದ ಅಧ್ಯಕ್ಷೆಯಾಗಿ ಸುಶ್ಮಾ ಗಿರೀಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ವೇತಾ ಶ್ರೀನಿಧಿ ಅವರು ಪದಗ್ರಹಣ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.