ಕಾಪು: ಟೈಮಿಂಗ್ ವಿಚಾರಕ್ಕೆ ಖಾಸಗಿ ಬಸ್ ಸಿಬ್ಬಂದಿಗಳ ಘರ್ಷಣೆ – ನಾಲ್ವರ ಬಂಧನ, ಎರಡು ಬಸ್ ವಶ – Copy

ಬಸ್ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಕಾಪು ಪೇಟೆಯಲ್ಲಿ ಎರಡು ಖಾಸಗಿ ಬಸ್‌ಗಳ ಚಾಲಕರು ಹಾಗೂ ಕಂಡಕ್ಟರ್‌ಗಳ ನಡುವೆ ಘರ್ಷಣೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಸ್ ಚಾಲಕರಾದ ರಮೇಶ್ ಮತ್ತು ಅಭಿಷೇಕ್ ಹಾಗು ನಿರ್ವಾಹಕರಾದ ವಿಜಯಕುಮಾರ್ ಹಾಗೂ ಹರೀಶ್ ಬಿ. ಹೆಗ್ಡೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಗೆ ಸಂಬಂಧಿಸಿದ ಎರಡೂ ಬಸ್‌ಗಳನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಕಾಪು ಪೊಲೀಸರು ತಿಳಿಸಿದ್ದಾರೆ.
ಮಣಿಪಾಲ ಪ್ರತಿಭಟನೆ ವೇಳೆ ರಾಷ್ಟ್ರ ಧ್ವಜಕ್ಕೆ ಅಪಮಾನ: ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಎಸ್‌ಪಿಗೆ ಬಿಜೆಪಿ ಯುವಮೋರ್ಚಾ ಮನವಿ

ಮಣಿಪಾಲದಲ್ಲಿ ಜುಲೈ 24ರಂದು ನಡೆದ ಪ್ರತಿಭಟನೆಯ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ, ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಕಾರ್ಯಕ್ಕೆ ಅಡ್ಡಿಪಡಿಸಿ ಸಾರ್ವಜನಿಕ ಶಾಂತಿ ಕದಡುವ ಕೃತ್ಯಗಳು ನಡೆದಿವೆ ಹಾಗೂ ಭಾರತದ ಪ್ರಧಾನಮಂತ್ರಿಯವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ FIR ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು. ನಗರ ಯುವಮೋರ್ಚಾ ಅಧ್ಯಕ್ಷ ಶ್ರೀವತ್ಸ ಅವರ ನೇತೃತ್ವದಲ್ಲಿ […]
ಸಿ.ಟಿ. ರವಿಗೆ ನೋಟಿಸ್: ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕುವ ಯತ್ನ – ಯಶ್ಪಾಲ್ ಸುವರ್ಣ ಆಕ್ರೋಶ

ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಪೊಲೀಸ್ ಇಲಾಖೆ ನೋಟಿಸ್ ನೀಡಿರುವ ಕ್ರಮವನ್ನು ಖಂಡಿಸಿರುವ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದುತ್ವವಾದಿ ನಾಯಕರ ಧ್ವನಿಯನ್ನು ಹತ್ತಿಕ್ಕುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ ಗೃಹ ಇಲಾಖೆ ಅಲ್ಪಸಂಖ್ಯಾತರ ತುಷ್ಟೀಕರಣ ಇಲಾಖೆಯಾಗಿ ಪರಿವರ್ತನೆಯಾಗಿದ್ದು, ಮತೀಯವಾದಿ ಶಕ್ತಿಗಳ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಟೀಕಿಸಿದರು. ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು […]
ಮನೆಯ ಅಂಗಳಕ್ಕೆ ನುಗ್ಗಿದ ಈಚರ್ ಲಾರಿ: ವಿದ್ಯುತ್ ಕಂಬಗಳಿಗೆ ಹಾನಿ

ಚಾಲಕನ ನಿಯಂತ್ರಣ ತಪ್ಪಿದ ಈಚರ್ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಕಂಬ ಹಾಗೂ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಬಳಿಕ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಶನಿವಾರ ರಾತ್ರಿ ಉಡುಪಿ ನಗರದ ಪೆರಂಪಳ್ಳಿ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಮಣಿಪಾಲದಿಂದ ಪೆರಂಪಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿಯು ರಾತ್ರಿ ಸುಮಾರು 9 ಗಂಟೆ ವೇಳೆಗೆ ನಿಯಂತ್ರಣ ತಪ್ಪಿ ಮೊದಲು ಟ್ರಾನ್ಸ್‌ಫಾರ್ಮರ್ ಕಂಬಕ್ಕೆ, ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಲಾರಿ ರವಿ ಪೂಜಾರಿ ಅವರಿಗೆ ಸೇರಿದ ಮನೆಯ […]
ನಮೂನೆ 11ಎ, 11ಬಿ ತಿದ್ದುಪಡಿ ಸೇವೆ ಪುನರಾರಂಭಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಕಳೆದ ಹಲವು ವಾರಗಳಿಂದ ಸ್ಥಗಿತಗೊಂಡಿರುವ ನಮೂನೆ 11ಎ ಮತ್ತು 11ಬಿ ತಿದ್ದುಪಡಿ ಸೇವೆಯನ್ನು ತಕ್ಷಣ ಪುನರಾರಂಭಿಸುವಂತೆ ಕಂದಾಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಪತ್ರ ಬರೆದು ಆಗ್ರಹಿಸಿದ್ದಾರೆ. ಗ್ರಾಮ ಪಂಚಾಯತ್ ಗಳಿಂದ ನೀಡಲಾಗುವ ನಮೂನೆ 11ಎ ಹಾಗೂ 11ಬಿಗಳಲ್ಲಿ ಕಣ್ತಪ್ಪಿನಿಂದ ಉಂಟಾಗುವ ಸಣ್ಣಪುಟ್ಟ ದೋಷಗಳನ್ನು ಈವರೆಗೆ ಗ್ರಾಮ ಪಂಚಾಯತ್ ಗಳ ಮೂಲಕ ಆನ್‌ಲೈನ್‌ನಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಅನುಮೋದನೆ ಪಡೆದು ತಿದ್ದುಪಡಿ ಮಾಡಲಾಗುತ್ತಿತ್ತು. ಆದರೆ, ಕಳೆದ ಮೂರು ವಾರಗಳಿಂದ […]
ರೆಸಾರ್ಟ್‌ನಲ್ಲಿ ಅಂದರ್-ಬಾಹರ್ ಜೂಜಾಟಕ್ಕೆ ದಾಳಿ: 26 ಮಂದಿ ಬಂಧನ, ₹17.81 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ರೆಸಾರ್ಟ್‌ನ ಕೊಠಡಿಗೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹1,31,630 ನಗದು, ಇಸ್ಪೀಟ್ ಎಲೆಗಳು, ಅಂದಾಜು ₹2 ಲಕ್ಷ ಮೌಲ್ಯದ 25 ಮೊಬೈಲ್ ಫೋನ್‌ಗಳು, […]
ರೆಸಾರ್ಟ್‌ನಲ್ಲಿ ಅಂದರ್-ಬಾಹರ್ ಜೂಜಾಟಕ್ಕೆ ದಾಳಿ: 26 ಮಂದಿ ಬಂಧನ, ₹17.81 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ರೆಸಾರ್ಟ್‌ನ ಕೊಠಡಿಗೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹1,31,630 ನಗದು, ಇಸ್ಪೀಟ್ ಎಲೆಗಳು, ಅಂದಾಜು ₹2 ಲಕ್ಷ ಮೌಲ್ಯದ 25 ಮೊಬೈಲ್ ಫೋನ್‌ಗಳು, […]
“ತೂಗುಸೇತುವೆಗಳ ಸರದಾರ” ಡಾ. ಗಿರೀಶ್ ಭಾರದ್ವಾಜ್ ನಿಧನ

ತೂಗುಸೇತುವೆಗಳ ನಿರ್ಮಾಣ ಕ್ಷೇತ್ರದಲ್ಲಿ ದೇಶ-ವಿದೇಶಗಳಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ, ಪದ್ಮಶ್ರೀ ಪುರಸ್ಕೃತ ಹಾಗೂ “ತೂಗುಸೇತುವೆಗಳ ಸರದಾರ” ಎಂದೇ ಖ್ಯಾತರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಡಾ. ಗಿರೀಶ್ ಭಾರದ್ವಾಜ್ ಅವರು ಮಂಗಳವಾರ ಮುಂಜಾನೆ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದರು. ಇಂಜಿನಿಯರಿಂಗ್ ಪದವಿ ಪಡೆದ ಬಳಿಕ “ಆಯಶಿಲ್ಪ ಇಂಜಿನಿಯರಿಂಗ್ ವರ್ಕ್ಸ್” ಸ್ಥಾಪಿಸಿದ್ದ ಡಾ. […]
ಪೆರ್ಡೂರು ಸಂಜೀವಿನಿ ಒಕ್ಕೂಟದಲ್ಲಿ 23 ಲಕ್ಷ ರೂ. ವಂಚನೆ: ದಂಪತಿ ಬಂಧನ

ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಸುಮಾರು ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿ ಮತ್ತು ಆಕೆಯ ಪತಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್ ಎಂದು ಗುರುತಿಸಲಾಗಿದೆ. ಸುಗಂಧಿ ಅವರು 2023ರಿಂದ 2025ರವರೆಗೆ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಮೊತ್ತವನ್ನು […]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ.ವಿದ್ಯಾರ್ಥಿನಿ ನಿಖಿತಾ (19) ಆತ್ಮಹತ್ಯೆ ಮಾಡಿಕೊಂಡವರು. ಜುಲೈ 1 ರಂದು ಬೆಳಿಗ್ಗೆ ನಿಖಿತಾ ಅವರ ತಾಯಿ ಕೆಲಸದ ನಿಮಿತ್ತ ಹೊರಗೆ ತೆರಳಿದ್ದ ವೇಳೆ, ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬಳಿಕ ಸ್ಥಳೀಯರು ಗಮನಿಸಿ ಕುಟುಂಬಸ್ಥರು […]
