ಜುಲೈ 5ರಂದು ಉಡುಪಿ ಜಿಲ್ಲಾ SASS ಕಾರ್ಯಕಾರಿಣಿ ಸಭೆ

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (SASS) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಜುಲೈ 5ರಂದು ಭಾನುವಾರ ಸಂಜೆ 4 ಗಂಟೆಗೆ ಉಡುಪಿಯ ಅಂಬಲಾಡಿ ಬೈಪಾಸ್ ಸಮೀಪದ ಹೋಟೆಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ಆಯೋಜಿಸಲಾಗಿದೆ. ಸಭೆಯಲ್ಲಿ ಉಡುಪಿ ತಾಲೂಕು ಸಮಿತಿಯ ಪದಗ್ರಹಣ ಹಾಗೂ ಕುಂದಾಪುರ ತಾಲೂಕು ಮಹಿಳಾ ಸಮಿತಿಯ ಪದಗ್ರಹಣ ಕಾರ್ಯಕ್ರಮಗಳು ನಡೆಯಲಿವೆ. SASS ಕೇಂದ್ರ ಸಮಿತಿ ಹಾಗೂ ರಾಜ್ಯ ಸಮಿತಿಯ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದು, ಜಿಲ್ಲಾ ಸಮಿತಿಯ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಚರ್ಚೆ ನಡೆಸಿ, […]
ಜು.3 ರಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಾಳೆ ಜು. 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯವಿಲ್ಲದಿದ್ದರೆ ಸಾರ್ವಜನಿಕರು ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಹವಾಮಾನ […]
ಮಣ್ಣಿನ ಜೊತೆ ಯೋಗ..ಮಕ್ಕಳ ಸಂಭ್ರಮ

ಶಾಲಾ ಶಿಕ್ಷಣ ಎಂದರೆ ಕೇವಲ ಪುಸ್ತಕಗಳಲ್ಲಿನ ಪಾಠವಲ್ಲ… ಅನುಭವದ ಮೂಲಕವೂ ಕಲಿಕೆ ಸಾಧ್ಯ ಎಂಬುದನ್ನು ಉಡುಪಿಯ ಪೋದಾರ್ ಪ್ರೆಪ್ ಶಾಲೆ ಮತ್ತೊಮ್ಮೆ ಸಾಬೀತುಪಡಿಸಿದೆ. “ಯೋಗ್ ಇನ್ ಮಡ್” ಎಂಬ ವಿಶಿಷ್ಟ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ, ಮಣ್ಣಿನೊಂದಿಗೆ ಆಟವಾಡುತ್ತಾ ಯೋಗಾಭ್ಯಾಸ ಮಾಡುವ ಅಪರೂಪದ ಅವಕಾಶ ಕಲ್ಪಿಸಲಾಯಿತು. ಮಕ್ಕಳಷ್ಟೇ ಅಲ್ಲ, ಪೋಷಕರೂ ಈ ಸಂಭ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಮಕ್ಕಳ ಮುಖದಲ್ಲಿನ ನಗು… ಕೈಯಲ್ಲಿ ಮಣ್ಣು… ಮನದಲ್ಲಿ ಸಂಭ್ರಮ… ಇದೇ ಉಡುಪಿಯ ಪೋದಾರ್ ಪ್ರೆಪ್ […]
ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ಮೃತ್ಯು

ಗೋವಾದಲ್ಲಿ ಕಾರ್ಯಕ್ರಮ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿವೇಷ ಕಲಾವಿದ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ಬ್ರಹ್ಮಾವರ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಸಂತೆಕಟ್ಟೆ ಲಕ್ಷ್ಮಿನಗರ ನಿವಾಸಿ ಮಂಜುನಾಥ್ (43)ಮೃತರು. ಗೋವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಇನ್ನೋವಾ ಕಾರಿನಲ್ಲಿ ನಾಲ್ವರು ಸ್ನೇಹಿತರೊಂದಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಉಡುಪಿಯತ್ತ ಸಂಚರಿಸುತ್ತಿದ್ದ ವೇಗದೂತ ಬಸ್ ದಿಢೀರ್ ಬ್ರೇಕ್ ಹಾಕಿದ ಪರಿಣಾಮ, ಹಿಂದಿನಿಂದ ಬರುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಬಸ್‌ನ […]
ಜು.4: ಉಡುಪಿ ತುಳುಕೂಟದಿಂದ ‘ಮದೆರೆಂಗಿದರಂಗ್’ ಕಾರ್ಯಕ್ರಮ

ತುಳು ಬದುಕಿನ ವೈಶಿಷ್ಟ್ಯಗಳು, ಸಂಪ್ರದಾಯಗಳು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಉಡುಪಿ ತುಳುಕೂಟದ ಪ್ರಾಯೋಜಕತ್ವದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಮದೆರೆಂಗಿದರಂಗ್’ ಕಾರ್ಯಕ್ರಮವು ಜುಲೈ 4ರಂದು ಉಡುಪಿ ಬಡಗಬೆಟ್ಟು ಸೊಸೈಟಿಯ ಮೇಲ್ಭಾಗದಲ್ಲಿರುವ ಜಗನ್ನಾಥ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಪ್ರದಾಯಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಎಲೆಯಿಂದ ಪೀಂಪಿರಿ ಊದುವ ಸ್ಪರ್ಧೆ, ಹಲಸಿನ ಬೀಜದ ಸಿಪ್ಪೆ ತೆಗೆಯುವ ಸ್ಪರ್ಧೆ […]
ಉಡುಪಿಯಲ್ಲಿ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್ ಪೋಲಿಯೋ […]
ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯ ಶವ ಪತ್ತೆ

ಉಡುಪಿಯ ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಯಾಜ್ ಅವರು ನದಿಯ ಬಳಿ ಇದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ […]
ಜು.11ರಂದು ಉಡುಪಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್: 2 ಸಾವಿರ ಪ್ರಕರಣಗಳ ಇತ್ಯರ್ಥ ಗುರಿ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜುಲೈ 11ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದೆ. ಈ ಲೋಕ ಅದಾಲತ್‌ನಲ್ಲಿ ಕನಿಷ್ಠ 2,000 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ರಾವ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 34,856 […]
ಉಡುಪಿ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ; ಪೊಲೀಸರು, ಶ್ವಾನದಳದಿಂದ ಪರಿಶೀಲನೆ

ಉಡುಪಿ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ನ್ಯಾಯಾಲಯದ ಆಡಳಿತಕ್ಕೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಉಡುಪಿ ನಗರ ಠಾಣೆಯ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ನ್ಯಾಯಾಲಯದ ಆವರಣದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ನ್ಯಾಯಾಲಯದ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅನುಮಾನಾಸ್ಪದ ವಸ್ತುಗಳಿಗಾಗಿ ಸಂಪೂರ್ಣ ಪರಿಶೀಲನೆ ಕೈಗೊಳ್ಳಲಾಗಿದೆ. ಗಮನಾರ್ಹವಾಗಿ, ಕೇವಲ ಐದು ದಿನಗಳ ಹಿಂದೆಯೂ “ಸಹನಾ” ಎಂಬ ಹೆಸರಿನ ಇಮೇಲ್ ಐಡಿಯಿಂದ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಆ ವೇಳೆ […]
ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕನ ಬಂಧನ: 1.52ಲಕ್ಷದ ಸೊತ್ತು ವಶ

ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲದ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಮಾಡುತ್ತಿದ್ದ ಆರೋಪದಡಿ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ ಹಾಗೂ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ಮೂಲದ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂಬಾತನನ್ನು ಬಂಧಿಸಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆ […]
