ಉಡುಪಿಯಲ್ಲಿ ಶಾಲಾ ಬಸ್ ಗಳ ತಪಾಸಣೆ…!

ಉಡುಪಿಯಲ್ಲಿ ಶಾಲಾ ಬಸ್ ಗಳ ತಪಾಸಣೆ…!

ಉಡುಪಿ ಹಾಗೂ ಮಣಿಪಾಲದ ಠಾಣಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಖಾಸಗಿ ಶಾಲಾ ಬಸ್ ಗಳನ್ನು ಇಂದು ಪೊಲೀಸರು ದಿಢೀರ್ ದಿಢೀರ್ ತಪಾಸಣೆಗೆ ಒಳಪಡಿಸಿದ್ದಾರೆ.

ಇತ್ತೀಚೆಗೆ ಶಾಲಾ ಬಸ್‌ಗಳ ಅಪಘಾತ ಪ್ರಕರಣಗಳು ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪೊಲೀಸರು ಶಾಲಾ ವಾಹನಗಳನ್ನು ಪರಿಶೀಲಿಸಿದರು.

ತಪಾಸಣೆ ವೇಳೆ ಬಸ್‌ಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ, ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸಾಗಿಸಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದರು.

ಇದರ ಜೊತೆಗೆ ವಾಹನ ಚಾಲಕರ ಚಾಲನಾ ಪರವಾನಗಿ, ವಾಹನದ ಫಿಟ್‌ನೆಸ್ ಪ್ರಮಾಣಪತ್ರ, ವಿಮೆ, ಆರ್‌ಟಿಒ ಪರ್ಮಿಟ್ ಸೇರಿದಂತೆ ಅಗತ್ಯ ದಾಖಲೆಗಳನ್ನೂ ಪರಿಶೀಲಿಸಲಾಯಿತು.

ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಖಾಸಗಿ ಶಾಲಾ ಬಸ್ ಅಪಘಾತದ ಬಳಿಕ ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಶಾಲಾ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದು, ಶಾಲಾ ಆಡಳಿತ ಮಂಡಳಿಗಳು ಹಾಗೂ ವಾಹನ ಮಾಲೀಕರು ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.