ಕಾಪು: ಟೈಮಿಂಗ್ ವಿಚಾರಕ್ಕೆ ಖಾಸಗಿ ಬಸ್ ಸಿಬ್ಬಂದಿಗಳ ಘರ್ಷಣೆ – ನಾಲ್ವರ ಬಂಧನ, ಎರಡು ಬಸ್ ವಶ

ಕಾಪು: ಟೈಮಿಂಗ್ ವಿಚಾರಕ್ಕೆ ಖಾಸಗಿ ಬಸ್ ಸಿಬ್ಬಂದಿಗಳ ಘರ್ಷಣೆ – ನಾಲ್ವರ ಬಂಧನ, ಎರಡು ಬಸ್ ವಶ

ಬಸ್ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಕಾಪು ಪೇಟೆಯಲ್ಲಿ ಎರಡು ಖಾಸಗಿ ಬಸ್‌ಗಳ ಚಾಲಕರು ಹಾಗೂ ಕಂಡಕ್ಟರ್‌ಗಳ ನಡುವೆ ಘರ್ಷಣೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಸ್ ಚಾಲಕರಾದ ರಮೇಶ್ ಮತ್ತು ಅಭಿಷೇಕ್ ಹಾಗು ನಿರ್ವಾಹಕರಾದ ವಿಜಯಕುಮಾರ್ ಹಾಗೂ ಹರೀಶ್ ಬಿ. ಹೆಗ್ಡೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಗೆ ಸಂಬಂಧಿಸಿದ ಎರಡೂ ಬಸ್‌ಗಳನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಕಾಪು ಪೊಲೀಸರು ತಿಳಿಸಿದ್ದಾರೆ.