ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ.ವಿದ್ಯಾರ್ಥಿನಿ ನಿಖಿತಾ (19) ಆತ್ಮಹತ್ಯೆ ಮಾಡಿಕೊಂಡವರು. ಜುಲೈ 1 ರಂದು ಬೆಳಿಗ್ಗೆ ನಿಖಿತಾ ಅವರ ತಾಯಿ ಕೆಲಸದ ನಿಮಿತ್ತ ಹೊರಗೆ ತೆರಳಿದ್ದ ವೇಳೆ, ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬಳಿಕ ಸ್ಥಳೀಯರು ಗಮನಿಸಿ ಕುಟುಂಬಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.